ಜಯಕರ ಶೆಟ್ಟಿ ಇಂದ್ರಾಳಿ ‘ಸಂಗೊಳ್ಳಿ ರಾಯಣ್ಣ ಪುರಸ್ಕಾರ-2024’ಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 10.  ಕರ್ನಾಟಕ ಶ್ರೀಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಉಡುಪಿ ಜಿಲ್ಲಾ ಘಟಕವು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಉಡುಪಿ ತಾಲೂಕು ಘಟಕದ ಸಹಕಾರದಲ್ಲಿ ನೀಡುವ ವಾರ್ಷಿಕ ‘ಸಂಗೊಳ್ಳಿ ರಾಯಣ್ಣ ಪುರಸ್ಕಾರ-2024’ಕ್ಕೆ ಜಯಕರ ಶೆಟ್ಟಿ ಇಂದ್ರಾಳಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ತಿಳಿಸಿದ್ದಾರೆ.


ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಯಕರ ಶೆಟ್ಟಿ ಇಂದ್ರಾಳಿ ಅವರಿಗೆ ಪ್ರಶಸ್ತಿ ಪತ್ರ, ಬೆಳ್ಳಿ ಪದಕ, ಫಲಕವನ್ನು ನೀಡಿ ಗೌರವಿಸಲಾಗುವುದು ಎಂದರು. ಕನ್ನಡ ನಾಡು, ನುಡಿ, ಸಂಸ್ಕೃತಿಯೊಂದಿಗೆ ಸಾಮಾಜಿಕ ಕ್ಷೇತ್ರದಲ್ಲಿ ಅವರು ಮಾಡಿದ ವಿಶೇಷ ಸಾಧನೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದ ಚಿಕ್ಕಮಠ, ನಾಲ್ಕನೇ ವರ್ಷದಲ್ಲಿ ತಮ್ಮ ಸಂಘಟನೆ ಈ ಪ್ರಶಸ್ತಿಯನ್ನು ನೀಡುತ್ತಿದೆ ಎನ್ನಲಾಗಿದೆ.

Also Read  ಬಂಟ್ವಾಳ: ಗಾಂಜಾ ಮಾರಾಟಕ್ಕೆ ಯತ್ನ ➤ ನೇಪಾಳದ ಯುವಕ ಸೇರಿ ಇಬ್ಬರ ಬಂಧನ

error: Content is protected !!
Scroll to Top