(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 10. ಕಾನೂನು ಮಾಪನಶಾಸ್ತ್ರ ನಿರೀಕ್ಷಕರು ಪುತ್ತೂರು ಕಚೇರಿಯಿಂದ ತೂಕ, ಅಳತೆ ಮತ್ತು ತೂಕದ ಸಾಧನಗಳ 2024ನೇ ಸಾಲಿನ ವಾರ್ಷಿಕ ಸತ್ಯಾಪನೆ ಮುದ್ರೆ ಶಿಬಿರವು ಸುಳ್ಯ ಗಾಂಧಿನಗರದ ಸರ್ಕಾರಿ ಪ್ರೌಢಶಾಲಾ ಮೈದಾನದ ಎದುರುಗಡೆ ಇರುವ ಎಸ್.ಜಿ ಸ್ಟೋರ್ ಬಿಲ್ಡಿಂಗ್‍ನ ಕೆಳ ಮಹಡಿಯಲ್ಲಿ ಪ್ರಾರಂಭಿಸಲಾಗಿದೆ.
ಸುಳ್ಯ ಶಿಬಿರ ವ್ಯಾಪ್ತಿಯಲ್ಲಿನ ಜಾಲ್ಸೂರು, ಸುಳ್ಯ, ಅಜ್ಜಾವರ, ಕಲ್ಲುಗುಂಡಿ, ಕುಕ್ಕುಜಡ್ಕ, ದೊಡ್ಡತೋಟ, ಎಲಿಮಲೆ, ಮಂಡೆಕೋಲು, ಸಂಪಾಜೆ, ಉಬರಡ್ಕ, ಉಬರಡ್ಕ ಮಿತ್ತೂರು, ಕನಕಮಜಲು, ಮರ್ಕಂಜ, ತೊಡಿಕಾನ, ಅರಂತೋಡು, ಕೊಡಿಯಾಳ, ಅಲೆಟ್ಟಿ ವ್ಯಾಪ್ತಿಯ ವ್ಯಾಪಾರಸ್ಥರು ಮತ್ತು ತೂಕ ಮತ್ತು ಅಳತೆ ಸಾಧನಗಳ ಬಳಕೆದಾರರು ತಾವು ಬಳಸುವ ತೂಕ, ಅಳತೆ ಮತ್ತು ತೂಕದ ಸಾಧನಗಳನ್ನು ಶಿಬಿರ ಕಚೇರಿಗೆ ಪ್ರತಿ ಬುಧವಾರ ಹಾಜರುಪಡಿಸಿ ಸತ್ಯಾಪನೆ ಮುದ್ರೆ ಮಾಡಿಸಬೇಕು. ಶಿಬಿರವು ನವೆಂಬರ್ 6ರಂದು ಮುಕ್ತಾಯಗೊಳ್ಳಲಿದೆ ಎಂದು ಪುತ್ತೂರು ಉಪ ವಿಭಾಗ ಕಾನೂನು ಮಾಪನಾಶಾಸ್ತ್ರ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.