ಉಳ್ಳಾಲದಲ್ಲಿ ಡಯಾಲಿಸಿಸ್ ಕೇಂದ್ರ – ಅರ್ಜಿ ಸಲ್ಲಿಸಲು ರೋಗಿಗಳಿಗೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 10. ಉಳ್ಳಾಲದ ನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶೀಘ್ರದಲ್ಲಿ ಹೊಸ ಡಯಾಲಿಸಿಸ್ ಚಿಕಿತ್ಸಾ ಕೇಂದ್ರ ಆರಂಭವಾಗುತ್ತಿರುವ ಹಿನ್ನೆಲೆ ಕೇಂದ್ರದ ವ್ಯಾಪ್ತಿಗೆ ಬರುವ ಡಯಾಲಿಸಿಸ್ ರೋಗಿಗಳು ಉಳ್ಳಾಲ ನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.


5 ಕಿ.ಮೀ. ವ್ಯಾಪ್ತಿಯಲ್ಲಿನ ಡಯಾಲಿಸಿಸ್ ರೋಗಿಗಳು (ಸ್ಥಳೀಯ), ಹಿರಿಯ ನಾಗರಿಕರು, ಮಹಿಳೆಯರು, ಕಡುಬಡವರು, ವಿಕಲಚೇತನರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಆದ್ಯತೆ ಮೇರೆಗೆ ಡಯಾಲಿಸಿಸ್ ರೋಗಿಗಳನ್ನು ಪರಿಗಣಿಸಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಆಡಳಿತ ವೈದ್ಯಾಧಿಕಾರಿ ನಗರ ಸಮುದಾಯ ಆರೋಗ್ಯ ಕೇಂದ್ರ ಉಳ್ಳಾಲ ಇಲ್ಲಿಗೆ ಬೆಳಿಗ್ಗೆ 9:00 ಯಿಂದ ಸಂಜೆ 4:30ರ ಕಚೇರಿ ಅವಧಿಯಲ್ಲಿ ಭೇಟಿ ನೀಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top