ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮನೆ ಮಂದಿಯನ್ನು ಬೆದರಿಸಿ ನಗ-ನಗದು ದರೋಡೆ – News Kadaba

ಮನೆ ಮಂದಿಯನ್ನು ಬೆದರಿಸಿ ನಗ-ನಗದು ದರೋಡೆ

(ನ್ಯೂಸ್ ಕಡಬ) newskadaba.com ಕೊಣಾಜೆ, ಜೂ.30. ಮನೆಯೊಂದರ ಬಾಗಿಲು ಒಡೆದು ಒಳನುಗ್ಗಿದ ಕಳ್ಳರು ಮನೆಯೊಳಗಿದ್ದ ವೃದ್ಧ ದಂಪತಿಯನ್ನು ಬೆದರಿಸಿ ಸುಮಾರು ಒಂದು ಲಕ್ಷ ವೌಲ್ಯದ ನಗ-ನಗದು ದೋಚಿ ಪರಾರಿಯಾದ ಘಟನೆ ಇಂದು ಬೆಳಗ್ಗಿನ ಜಾವ ಕೊಣಾಜೆ ಗ್ರಾಮದ ನಡುಪದವಿನಲ್ಲಿ ನಡೆದಿದೆ.

ದಸ್ತಾವೇಜು ಬರಹಗಾರರಾಗಿರುವ ನಡುಪದವು ನಿವಾಸಿ ಸದಾಶಿವಯ್ಯ ಎಂಬವರ ಮನೆಯಿಂದ ಈ ದರೋಡೆ ನಡೆದಿದೆ. ಸುಮಾರು 30 ಸಾವಿರ ರೂ. ನಗದು ಹಾಗೂ 20 ಗ್ರಾಮ ಚಿನ್ನಾಭರಣವನ್ನು ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಮುಂಜಾನೆ 3 ಗಂಟೆ ಸುಮಾರಿಗೆ ಕಳ್ಳರು ಮನೆಯ ಕಾಂಪೌಂಡ್ ಹಾರಿ ಮನೆಯ ಆವರಣ ಪ್ರವೇಶಿಸಿದ್ದಾರೆ. ಬಳಿಕ ಮನೆಯೊಳಗಿದ್ದವರು ಹೊರಗಡೆ ಬರದಿರಲು ಮನೆಯ ಹಿಂಬಾಗಿಲ ಚಿಲಕವನ್ನು ಹೊರಗಡೆಯಿಂದ ಭದ್ರಪಡಿಸಿ ಮುಂಬಾಗಿಲನ್ನು ಮುರಿದು ಒಳನುಗ್ಗಿದ್ದಾರೆ. ಮನೆಯ ಕೋಣೆಯ ಕಪಾಟಿನಲ್ಲಿದ್ದ ನಗದು ಹಾಗೂ ಚಿನ್ನಾಭರಣವನ್ನು ಕಳವುಗೈದಿದ್ದಾರೆ. ಈ ವೇಳೆ ಎಚ್ಚರಗೊಂಡ ಸದಾಶಿವಯ್ಯ ದಂಪತಿಯನ್ನು ಬೆದರಿಸಿದ ಕಳ್ಳರು ಸೂಟ್‌ಕೇಸ್‌ನಲ್ಲಿಟ್ಟಿದ್ದ ಚಿನ್ನಾಭರಣವನ್ನು ದರೋಡೆಗೈದು ಪರಾರಿಯಾಗಿದ್ದಾರೆನ್ನಲಾಗಿದೆ. ಸದಾಶಿವಯ್ಯ ಅವರ ಬಗ್ಗೆ ಮಾಹಿತಿ ಇದ್ದವರೇ ಈ ಕೃತ್ಯ ಎಸಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಕೊಣಾಜೆ ಪೊಲೀಸರು ತನಿಖೆ ನಡೆಸುತ್ತಿದ್ದು, ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರನ್ನು ಕರೆಸಲಾಗಿದೆ. ಎಸಿಪಿ ಶ್ರುತಿ ಭೇಟಿ ನೀಡಿದ್ದಾರೆ. ಘಟನೆಯ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Scroll to Top