ಕೊಡಗು ಜಿಲ್ಲೆಯಾದ್ಯಂತ ಉತ್ತಮ ಮಳೆ- ಕೃಷಿಗೆ ಹಾನಿ

(ನ್ಯೂಸ್ ಕಡಬ) newskadaba.com ಮಡಿಕೇರಿ, ಸೆ. 10.  ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಮಳೆ ತೀವ್ರತೆಯನ್ನು ಪಡೆದುಕೊಂಡಿದ್ದು, ಜನರ ದೈನಂದಿನ ಬದುಕಿಗೆ ಅಡಚಣೆಯಾಗಿದೆ. ಅಲ್ಲದೆ ಕೃಷಿ ಫಸಲಿಗೆ ಅಪಾರ ಹಾನಿ ಸಂಭವಿಸುವ ಸಾಧ್ಯತೆಗಳಿದೆ ಎನ್ನಲಾಗಿದೆ.

ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಮಂಜು ಕವಿದ ವಾತಾವರಣದೊಂದಿಗೆ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಮೈಕೊರೆಯುವ ಚಳಿ ಇದೆ. ರಸ್ತೆಗಳ ಮೇಲೆ ಹರಿಯುತ್ತಿರುವ ನೀರು ಜನ ಮತ್ತು ವಾಹನಗಳ ಸಂಚಾರಕ್ಕೆ ತೊಡಕನ್ನುಂಟು ಮಾಡುತ್ತಿದೆ. ಹೊಂಡ ಗುಂಡಿಗಳಾಗಿರುವ ಮಡಿಕೇರಿ ನಗರದ ಬಹುತೇಕ ರಸ್ತೆಗಳು ಮಳೆಯಿಂದ ಕೆಸರುಮಯವಾಗಿದೆ. ಗ್ರಾಮೀಣ ಭಾಗದಲ್ಲೂ ಅತ್ಯಧಿಕ ಮಳೆಯಾಗುತ್ತಿದ್ದು, ಕೆಲವು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ ಎಂದು ವರದಿ ತಿಳಿಸಿದೆ.

Also Read  ಅಂಗನವಾಡಿಗಳಿಗೆ ಆಹಾರ ಸಾಗಾಣಿಕೆ : ಟೆಂಡರ್ ಆಹ್ವಾನ

error: Content is protected !!
Scroll to Top