ಎಚ್ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 10. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಜಿಲ್ಲಾ ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ರಾಷ್ಟ್ರೀಯ ಸೇವಾ ಯೋಜನೆ ಘಟಕ, ರೆಡ್ ರಿಬ್ಬನ್ ಕ್ಲಬ್‍ಗಳು, ಡೆಕಾಥ್ಲಾನ್ ಭಾರತ್ ಮಾಲ್, ಸ್ಕೂಲ್ ಬುಕ್ ಕಂಪನಿ, ಲಯನ್ಸ್ ಕ್ಲಬ್ ಮಂಗಳೂರು, ಯಂಗ್ ಇಂಡಿಯಾ ಮಂಗಳೂರು, ಪ್ರಗತಿ ಸ್ಟಡಿ ಸೆಂಟರ್ ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ಯುವಜನೋತ್ಸವ 2024ರ ಅಂಗವಾಗಿ ಎಚ್‍ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ ನಡೆಯಿತು. ರೆಡ್ ರಿಬ್ಬನ್ ರನ್ ಯೂಥ್ ಫಾರ್ ಎಚ್‍ಐವಿ/ಏಡ್ಸ್ ಎಂಬ ಘೋಷದೊಂದಿಗೆ ಮಂಗಳಾ ಕ್ರೀಡಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಜಿ ಸಂತೋಷ್ ಕುಮಾರ್ ಹಸಿರು ನಿಶಾನೆ ನೀಡುವ ಮೂಲಕ ಚಾಲನೆ ನೀಡಿದರು.

ಮ್ಯಾರಥಾನ್ ಸ್ಪರ್ಧೆಯಲ್ಲಿ ಜಿಲ್ಲೆಯಿಂದ ಬಂದಿರುವ ವಿವಿಧ ಕಾಲೇಜುಗಳಿಂದ ಸುಮಾರು 65 ಮಂದಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಿದರು. ಮಹಿಳಾ ವಿಭಾಗ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಶ್ರೀದೇವಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇಲ್ಲಿನ ವಿದ್ಯಾರ್ಥಿನಿ ಕು. ಶ್ರೇಯಾ, ದ್ವಿತೀಯ ಬಹುಮಾನವನ್ನು ವಿವೇಕಾನಂದ ಕಾಲೇಜು ವಿದ್ಯಾರ್ಥಿನಿ ಕು. ವಿದ್ಯಾ, ತೃತಿಯ ಬಹುಮಾನವನ್ನು ಸಂತ ಅಲೋಷಿಯಸ್ ಕಾಲೇಜು ವಿದ್ಯಾರ್ಥಿನಿ ವಿಸ್ಮಯ ಶೆಟ್ಟಿ ಪಡೆದುಕೊಂಡರು. ಪುರುಷರ ವಿಭಾಗದಲ್ಲಿ ಪುತ್ತೂರು ಸ್ವಾಮಿ ವಿವೇಕಾನಂದ ಕಾಲೇಜು ವಿದ್ಯಾರ್ಥಿ ರಂಗಣ್ಣ, ಕೆವಿಜಿ ಸುಳ್ಯ ವಿದ್ಯಾರ್ಥಿ ತಿಶಾನ್ ಮಾದಪ್ಪ, ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವಿದ್ಯಾರ್ಥಿ ಅಕ್ಷಯ ಅವರು ಪಡೆದುಕೊಂಡರು. ಬಹುಮಾನ ವಿಜೇತರನ್ನು ಅಪರ ಜಿಲ್ಲಾಧಿಕಾರಿ ಡಾ. ಜಿ ಸಂತೋಷ್ ಕುಮಾರ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಚ್.ಆರ್ ತಿಮ್ಮಯ್ಯ ಗೌರವಿಸಿದರು.

Also Read  ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ವಂದೇ ಭಾರತ್ ಎಕ್ಸ್-ಪ್ರೆಸ್ ರೈಲು ಸಂಚಾರ ಆರಂಭ - ಸಂಸದರ ಮನವಿಗೆ ರೈಲ್ವೇ ಸಚಿವರ ಭರವಸೆ


ಮುಖ್ಯ ಅತಿಥಿಗಳಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಚ್.ಆರ್ ತಿಮ್ಮಯ್ಯ, ನೆಹರು ಯುವ ಕೇಂದ್ರ ಆಡಳಿತ ಅಧಿಕಾರಿ ಜಗದೀಶ್ ಕೆ, ಜಿಲ್ಲಾ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜಾ, ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ. ಶೇಷಪ್ಪ ಕೆ, ಯನ್ಸ್ ಕ್ಲಬ್ ಸ್ಮಾರ್ಟ್ ಸಿಟಿ ಹರಿಪ್ರಸಾದ್, ಪ್ರಗತಿ ಸ್ಟಡಿ ಸೆಂಟರ್ ಡಾ. ಮೇಘ ಗೋಕುಲ್, ಡೆಕಾಥ್ಲಾನ್ ಭಾರತ್ ಮಾಲ್ ಸ್ನೇಹ, ಯಂಗ್ ಇಂಡಿಯಾ ಗುರುಪ್ರಸಾದ್, ಡಾ.ಸುದರ್ಶನ್, ಡಾ. ಚಿರಾಗ್ ಮತ್ತಿತರರು ಭಾಗವಹಿಸಿದ್ದರು. ಜಿಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ. ಸುಜಯ್ ಕುಮಾರ್ ಸ್ವಾಗತಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು ಜಿಲ್ಲಾ ಕಾರ್ಯಕ್ರಮ ಮೇಲ್ವಿಚಾರಕ ಮಹೇಶ್ ವಂದಿಸಿದರು.

error: Content is protected !!
Scroll to Top