ಕ್ಯಾನ್ಸರ್ ಔಷಧಿಗಳ ಜಿಎಸ್‌ಟಿ ದರ ಶೇ.12 ರಿಂದ ಶೇ.5 ಕ್ಕೆ ಇಳಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 10. ಕೆಲವು ಕ್ಯಾನ್ಸರ್ ಔಷಧಿಗಳ ದರವನ್ನು ಕಡಿಮೆ ಮಾಡಲು ಜಿಎಸ್ಟಿ ಕೌನ್ಸಿಲ್ ನಿರ್ಧರಿಸಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ವರದಿಯ ಪ್ರಕಾರ, ನವೆಂಬರ್‌ ನಲ್ಲಿ ನಡೆಯಲಿರುವ ಸಭೆಯಲ್ಲಿ ವೈದ್ಯಕೀಯ ಆರೋಗ್ಯ ವಿಮೆಯ ಮೇಲಿನ ದರ ಕಡಿತದ ಕುರಿತು ಕೌನ್ಸಿಲ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದೆನ್ನಲಾಗಿದೆ.‌ ಸೋಮವಾರದಂದು ನಡೆದ ಜಿಎಸ್‌ಟಿ ಕೌನ್ಸಿಲ್‌ನ 54 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಸೀತಾರಾಮನ್, ಕೆಲವು ಕ್ಯಾನ್ಸರ್ ಔಷಧಿಗಳ ಮೇಲಿನ ಜಿಎಸ್‌ಟಿ ದರವನ್ನು ಶೇ.12 ರಿಂದ ಶೇ.5 ಕ್ಕೆ ಇಳಿಸಲಾಗಿದೆ ಎಂದು ಹೇಳಿದರು. ಕಳೆದ ಆರು ತಿಂಗಳಲ್ಲಿ ಆನ್‌ಲೈನ್ ಗೇಮಿಂಗ್‌ನಿಂದ ಗಳಿಸಿದ ಆದಾಯವು ಶೇ.412 ರಷ್ಟು ಹೆಚ್ಚಾಗಿದೆ. ಆನ್‌ಲೈನ್ ಗೇಮಿಂಗ್‌ನಿಂದ ಆದಾಯವು ಆರು ತಿಂಗಳಲ್ಲಿ 6,909 ಕೋಟಿ ರೂ.ಗೆ ಹೆಚ್ಚಾಗಿದೆ. ಇದಲ್ಲದೇ, ಕಳೆದ ಆರು ತಿಂಗಳಲ್ಲಿ ಕ್ಯಾಸಿನೊಗಳ ಆದಾಯವು ಶೇ.34 ರಷ್ಟು ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.

Also Read  ರಾಜ್ಯದ 10 ವಿಜ್ಞಾನಿಗಳಿಗೆ ಯಂಗ್‌ ಸೈಂಟಿಸ್ಟ್‌ ಪ್ರಶಸ್ತಿ

 

error: Content is protected !!
Scroll to Top