ಆಟೋ ರಿಕ್ಷಾ ಅಪಘಾತದಲ್ಲಿ ತಾಯಿಯನ್ನು ರಕ್ಷಿಸಲು ಧಾವಿಸಿದ ವಿದ್ಯಾರ್ಥಿನಿಯ ಧೈರ್ಯವನ್ನು ಶ್ಲಾಘಿಸಿದ ಸಿಎಂ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 10. ರಸ್ತೆ ದಾಟುವಾಗ ಡಿಕ್ಕಿ ಹೊಡೆದು ಆಟೋ ರಿಕ್ಷಾದ ಕೆಳಗೆ ಬಿದ್ದ ತಾಯಿಯನ್ನು ರಕ್ಷಿಸಲು ಧಾವಿಸಿದ ಏಳನೇ ತರಗತಿ ವಿದ್ಯಾರ್ಥಿನಿ ವೈಭವಿಯ ಧೈರ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘಿಸಿದರು.

ವೈಭವಿ ಅವರ ತಾಯಿ ಚೇತನಾ ಅವರು ವೈಭವಿ ಅವರ ಟ್ಯೂಷನ್ ಸೆಂಟರ್ ಬಳಿ ರಸ್ತೆ ದಾಟುತ್ತಿದ್ದಾಗ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದ್ದಾರೆ. ವೈಭವಿ ಕೇಂದ್ರದಿಂದ ಹೊರಬರುತ್ತಿದ್ದಂತೆ ಅವರ ಎದುರೇ ಅಪಘಾತ ಸಂಭವಿಸಿದೆ. ತಕ್ಷಣ ಘಟನಾ ಸ್ಥಳಕ್ಕೆ ಓಡಿ ಆಟೋ ರಿಕ್ಷಾವನ್ನು ಎತ್ತಿ ತನ್ನ ತಾಯಿಯನ್ನು ರಕ್ಷಿಸಿದಳು. ಬೆನ್ನುಹುರಿಯ ಗಾಯದಿಂದ ಬಳಲುತ್ತಿರುವ ಚೇತನಾ ಸದ್ಯ ಸುರತ್ಕಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕುಟುಂಬವೂ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ಅಪಘಾತ ಸಂಭವಿಸಿದ ಸ್ಥಳಗಳಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಬೇಕಿದ್ದ ಜನರು ಸುತ್ತಲೂ ನಿಂತು ಮೊಬೈಲ್ ಮೂಲಕ ವೀಡಿಯೋ ಮಾಡುವುದನ್ನು ಹಲವು ಬಾರಿ ಮಾಧ್ಯಮಗಳಲ್ಲಿ ಕಂಡಿದ್ದೆ, ಇದು ಭವಿಷ್ಯದ ದಿನಗಳ ಬಗ್ಗೆ ನನ್ನಲ್ಲಿ ಆತಂಕವನ್ನೂ ಮೂಡಿಸಿತ್ತು. ಈ ಪುಟ್ಟ ಬಾಲಕಿಯ ಕಾರ್ಯ ಇಡೀ ಸಮಾಜಕ್ಕೊಂದು ಸಂದೇಶ ರವಾನಿಸಿದಂತಿದೆ. ಅಪಘಾತ, ಬೆಂಕಿ ಅನಾಹುತ, ಹೃದಯಾಘಾತ ಇಂತಹ ತುರ್ತು ಸಂದರ್ಭದಲ್ಲಿ ಸಂತ್ರಸ್ತರ ಪಾಲಿಗೆ ಪ್ರತಿ ಸೆಕೆಂಡ್ ಕೂಡ ಅಮೂಲ್ಯ. ಈ ವೇಳೆ ಮಾನವೀಯತೆ ಮರೆಯದಿರಿ ಎಂದು ಸಿಎಂ ಮನವಿ ಮಾಡಿದರು ಎಂದು ವರದಿ ತಿಳಿಸಿದೆ.

Also Read  ನೂಜಿಬಾಳ್ತಿಲ ಗ್ರಾ.ಪಂ. ಉದ್ಯೋಗಿ ವಿಕ್ರಮ್ ರೈ ಆತ್ಮಹತ್ಯೆ

 

 

error: Content is protected !!
Scroll to Top