ನಟ ದರ್ಶನ್ ಸಹಿತ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 10. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ 17 ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ 24ನೇ ಎಸಿಎಂಎಂ ನ್ಯಾಯಾಲಯವು, ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು 3 ದಿನಗಳ ಕಾಲ ವಿಸ್ತರಿಸಿ (ಸೆ. 12) ಆದೇಶಿಸಿದೆ.

ವಿಚಾರಣೆ ಸಂದರ್ಭದಲ್ಲಿ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಅವರು ಹಾರ್ಡ್ ಡಿಸ್ಕ್, ಪೆನ್ ಡ್ರೈವ್ ಸೇರಿದಂತೆ 60ಕ್ಕೂ ಹೆಚ್ಚು ಸಾಕ್ಷ್ಯಗಳನ್ನು ಸಲ್ಲಿಸಿದಲ್ಲದೇ 2 ವಾರದಲ್ಲಿ ಡಿಜಿಟಲ್ ಸಾಕ್ಷ್ಯಗಳನ್ನು ಸಲ್ಲಿಸುವುದಾಗಿ ಕೋರ್ಟ್ ಗೆ ಮಾಹಿತಿ ನೀಡಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಆರೋಪಿಗಳಿಗೆ ಮೂರು ದಿನಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶಿಸಿತು.

Also Read  ಮಂಗಳೂರು: " ರಿವರ್ ಫೆಸ್ಟ್ “ ಗೆ ಭರದಿಂದ ಸಾಗುತ್ತಿದೆ ಸಿದ್ಧತೆ

 

error: Content is protected !!
Scroll to Top