(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 10. ಭಾರೀ ವಿವಾದಕ್ಕೆ ಕಾರಣವಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಮುಡಾದಲ್ಲಿ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಮುಖ್ಯ ಅಧೀಕ್ಷಕ (ಚೀಫ್ ಸೂಪರಿಂಡೆಂಟ್), ಮುಖ್ಯ ಅಭಿಯಂತರ(ಚೀಫ್ ಇಂಜಿನಿಯರ್) ಹಾಗೂ ಕಾರ್ಯದರ್ಶಿ ಸೇರಿದಂತೆ 2017ರಲ್ಲಿ ಕರ್ತವ್ಯ ನಿರ್ವಹಿಸಿದ್ದ ಒಟ್ಟು 18 ಅಧಿಕಾರಿಗಳನ್ನು ವಿಚಾರಣೆಗೆ ಹಾಜರಾಗುವಂತೆ ಮುಡಾ ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಿರುವುದಾಗಿ ತಿಳಿದುಬಂದಿದೆ.
ವರದಿಯ ಪ್ರಕಾರ, ಗುರುವಾರದೊಳಗೆ ಈ ಎಲ್ಲಾ ಅಧಿಕಾರಿಗಳು ವಿಚಾರಣೆಗೆ ಹಾಜರಾಗಬೇಕು. ಮುಡಾದಲ್ಲಿ 350ಕ್ಕೂ ಹೆಚ್ಚು ಪ್ರಭಾವಿ ಅಧಿಕಾರಿಗಳಿಗೆ ನಿವೇಶನ ಹಂಚಿಕೆ ಆರೋಪ ಪ್ರಕರಣ ಕುರಿತಂತೆ ಕೇಳಿಬಂದಿರುವ ಆರೋಪಗಳಿಗೆ ದಾಖಲೆಗಳನ್ನು ಹಾಜರುಪಡಿಸುವಂತೆಯೂ ಸೂಚನೆ ನೀಡಲಾಗಿದೆ.