ಬಂಟ್ವಾಳ: ಕಲ್ಲಡ್ಕ ವಲಯ ಮಟ್ಟದ ಪ್ರೌಢಶಾಲಾ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 10.  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಹಾಗೂ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ವಿದ್ಯಾನಗರ ಪೆರಾಜೆ ಇವರ ಜಂಟಿ ಸಹಯೋಗದೊಂದಿಗೆ ಕಲ್ಲಡ್ಕ ವಲಯ ಮಟ್ಟದ ಪ್ರೌಢಶಾಲಾ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟವು ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು.


ಕ್ರೀಡಾಕೂಟದಲ್ಲಿ ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕದ ಬಾಲಕರ ಹಾಗೂ ಬಾಲಕಿಯರ ತಂಡಗಳು ಪ್ರಥಮ ಸ್ಥಾನ ಪಡೆದಿದ್ದು, ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ಹಾಗೂ ಬಾಲಕಿಯರ ತಂಡಗಳು ದ್ವಿತೀಯ ಸ್ಥಾನ ಪಡೆದು 4 ತಂಡಗಳು ಕೂಡ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತವೆ. ಒಟ್ಟು 7 ಬಾಲಕರ ತಂಡಗಳು ಹಾಗೂ 4 ಬಾಲಕಿಯರ ತಂಡಗಳು ಭಾಗವಹಿಸಿದ್ದವು.

Also Read  30 ನಗರಗಳೊಂದಿಗೆ 'ಸಿಸ್ಟರ್ ಸಿಟಿ' ಒಪ್ಪಂದ ಮಾಡಿಕೊಂಡ ನಿತ್ಯಾನಂದ

 

error: Content is protected !!
Scroll to Top