ಜಿಮ್ ಟ್ರೈನರ್ ಹಲ್ಲೆ ಕೇಸ್‌..!  ನಟ ಧ್ರುವ ಸರ್ಜಾ ಮ್ಯಾನೇಜರ್ ಅರೆಸ್ಟ್..! 

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 10.  ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲಿನ ಹಲ್ಲೆ ಕೇಸ್‌ಗೆ ಸಂಬಂಧಪಟ್ಟಂತೆ ನಟ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್‌ ರನ್ನು ಪೊಲೀಸರು ಬಂಧಿಸಿದ್ದಾರೆ.

ಮೇ 26 ರಂದು ರಾತ್ರಿ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ನಡೆದಿತ್ತು. ಹರ್ಷ ಮತ್ತು ಸುಭಾಷ್ ಎಂಬುವವರು ಪ್ರಶಾಂತ್ ಮೇಲೆ ಹಲ್ಲೆ ನಡೆಸಿದ್ದರು. ಹಲ್ಲೆ ಮಾಡಿಸಿದ್ದು ಧ್ರುವ ಸರ್ಜಾ ಬಳಿ ಕೆಲಸ ಮಾಡಿಕೊಂಡಿದ್ದ ನಾಗೇಂದ್ರ. ಧ್ರುವಗೆ ನಾಗೇಂದ್ರ ಚಾಲಕನಾಗಿಯೂ ಕೆಲಸ ಮಾಡಿಕೊಂಡಿದ್ದರು. ಹಲ್ಲೆ ನಡೆಸಲು ನಾಗೇಂದ್ರಗೆ ಧ್ರುವ ಮ್ಯಾನೇಜರ್ ಅಶ್ವಿನ್ ಸಾಥ್ ಕೊಟ್ಟಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಪ್ರಶಾಂತ್ ಪೂಜಾರಿ ಅವರು ನಟ ಧ್ರುವ ಸರ್ಜಾಗೆ ಜಿಮ್‌ನಲ್ಲಿ ತರಬೇತಿ ನೀಡುತ್ತಿದ್ದು, ಇವರಿಬ್ಬರು ಆಪ್ತರಾಗಿದ್ದರು. ಆದರೆ ಇವರಿಬ್ಬರ ನಡುವಿನ ಆಪ್ತತೆಯನ್ನು ನಾಗೇಂದ್ರ ಹಾಗೂ ಅಶ್ವಿನ್‌ಗೆ ಸಹಿಸಿಕೊಳ್ಳಲು ಸಾದ್ಯವಾಗದೇ ಹಲ್ಲೆಗೆ ಪ್ಲ್ಯಾನ್ ರೂಪಿಸಿದ್ದರು. ತನಿಖೆ ವೇಳೆ ಅಶ್ವಿನ್ ಪಾತ್ರ ಇರುವುದು ಬೆಳಕಿಗೆ ಬಂದಿದ್ದು, ಅಶ್ವಿನ್ ನನ್ನು ಬಂಧಿಸಲಾಗಿದೆ ಎನ್ನಲಾಗಿದೆ.

Also Read  ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ  ➤  20 ಪ್ರವಾಸಿಗರಿಗೆ ಗಾಯ

 

error: Content is protected !!
Scroll to Top