ವಾಷಿಂಗ್ ಮೆಷಿನ್ ನಲ್ಲಿ 3 ವರ್ಷದ ಬಾಲಕನ ಮೃತದೇಹ ಪತ್ತೆ ಮಹಿಳೆ ಅರೆಸ್ಟ್                          

(ನ್ಯೂಸ್ ಕಡಬ) newskadaba.com ತಮಿಳುನಾಡು, ಸೆ. 10.  ತಿರುನಲ್ವೇಲಿ ಜಿಲ್ಲೆಯ ರಾಧಾಪುರಂ ಪ್ರದೇಶದಲ್ಲಿ ವಾಷಿಂಗ್ ಮೆಷಿನ್ ನಲ್ಲಿ ಮೂರು ವರ್ಷದ ಬಾಲಕನ ಮೃತದೇಹ ಪತ್ತೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ನೆರೆಮನೆಯ ಮಹಿಳೆಯನ್ನು ಬಂಧಿಸಲಾಗಿದೆ.

ಬಾಲಕನನ್ನು ಕೊಲೆ ಮಾಡಿ ಮೃತದೇಹವನ್ನು ವಾಷಿಂಗ್ ಮೆಷಿನ್ ನಲ್ಲಿ ಮರೆಮಾಡಿದ ಆರೋಪದ ಮೇಲೆ 40 ವರ್ಷದ ಮಹಿಳೆಯೋರ್ವರನ್ನು ಪೊಲೀಸರು ಬಂಧಿಸಿದ್ದಾರೆ. ಅಂಗನವಾಡಿಗೆ ತೆರಳುವ ಮುನ್ನ ಮನೆಯ ಹೊರಗೆ ಆಟವಾಡುತ್ತಿದ್ದ ಬಾಲಕ ಸೋಮವಾರ ನಾಪತ್ತೆಯಾಗಿದ್ದ. ನಮ್ಮ ನೆರೆಯ ಮನೆಯವರ ಜೊತೆ ತಕರಾರಿದ್ದು ಅವರ ಮನೆಯಲ್ಲಿ ಹುಡುಕಾಟ ನಡೆಸುವಂತೆ ಪೊಲೀಸರಿಗೆ ಬಾಲಕನ ಪೋಷಕರು ಆಗ್ರಹಿಸಿದ್ದಾರೆ. ಇದರಂತೆ ಹುಡುಕಾಟವನ್ನು ನಡೆಸಿದಾಗ ಪಕ್ಕದ ಮನೆಯ ವಾಷಿಂಗ್ ಮೆಷಿನ್ ನಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಹಿಳೆ ಮತ್ತು ಮೃತ ಬಾಲಕನ ಕುಟುಂಬದ ನಡುವೆ ಜಮೀನಿಗೆ ಸಂಬಂಧಿಸಿದ ವಿವಾದವಿತ್ತು. ಆರೋಪಿ ಮಹಿಳೆಯ ಮಗ ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ. ಆ ಬಳಿಕ ಅವರು ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಎನ್ನಲಾಗಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ವರದಿ ತಿಳಿಸಿದೆ.

Also Read  ರಫೆಲ್‌ ನಡಾಲ್‌ ಸೋಲಿನೊಂದಿಗೆ ಟೆನಿಸ್‌ ​ವೃತ್ತೀಜಿವನಕ್ಕೆ ವಿದಾಯ

 

error: Content is protected !!
Scroll to Top