ಪಿಎಸ್‍ಐ ಪರೀಕ್ಷೆಯನ್ನು ಮುಂದೂಡುವಂತೆ ಒತ್ತಾಯ  ಗೃಹಸಚಿವರಿಗೆ ಮನವಿ ಸಲ್ಲಿಸಿದ ಅಶ್ವತ್ಥನಾರಾಯಣ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 10.  ಪಿಎಸ್‍ಐ ಪರೀಕ್ಷೆಯನ್ನು ಮುಂದೂಡಲು ಒತ್ತಾಯಿಸಿದ್ದು, ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಕ್ರಮ ವಹಿಸುವ ಪ್ರಯತ್ನ ಮಾಡುವುದಾಗಿ ಗೃಹ ಸಚಿವರು ತಿಳಿಸಿದ್ದಾಗಿ ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು ತಿಳಿಸಿದರು.

ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು ಹಾಗೂ ಪರೀಕ್ಷಾರ್ಥಿಗಳು ಇಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಬೆಂಗಳೂರಿನ ಸದಾಶಿವನಗರದ ಸರಕಾರಿ ನಿವಾಸಕ್ಕೆ ಭೇಟಿ ನೀಡಿ ಪಿಎಸ್‍ಐ ಪರೀಕ್ಷೆಯನ್ನು ಮುಂದೂಡಬೇಕೆಂದು ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ,ಪರೀಕ್ಷೆ ಮುಂದೂಡುವ ವಿಶ್ವಾಸವಿದೆ ಎಂದ ಅವರು, 402 ಹುದ್ದೆ ಪೈಕಿ 102 ಜನರು ಹಾಲ್ ಟಿಕೆಟ್ ಹೊಂದಿದವರು ಯುಪಿಎಸ್ಸಿ ಮೈನ್ಸ್ ಗೆ ಆಯ್ಕೆಯಾಗಿದ್ದಾರೆ. ಈ ಸಂಖ್ಯೆ ಇನ್ನೂ ಹೆಚ್ಚಾಗಿರುವ ಸಾಧ್ಯತೆ ಇದೆ. ಯುಪಿಎಸ್ಸಿ ಮೈನ್ಸ್ ಗೆ ಆಯ್ಕೆಯಾದವರು ಪಿಎಸ್‍ಐ ಪರೀಕ್ಷೆಯಲ್ಲಿ 100ಕ್ಕೆ ನೂರು ಆಯ್ಕೆ ಆಗಿಯೇ ಆಗುತ್ತಾರೆ. ಅವರಿಗೆ ಅನ್ಯಾಯ ಆಗಬಾರದು ಎಂದು ಹೇಳಿದರು.

error: Content is protected !!

Join the Group

Join WhatsApp Group