ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಇಂದು ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ – News Kadaba

ಇಂದು ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು, ಕಂಕನಾಡಿ ಮಂಗಳೂರು, ರಾಷ್ಟ್ರೀಯ ಸೇವಾ ಯೋಜನೆ ವಿಶ್ವವಿದ್ಯಾನಿಲಯ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮವನ್ನು ಸೆಪ್ಟೆಂಬರ್ 11ರಂದು ಬೆಳಿಗ್ಗೆ 10 ಗಂಟೆಗೆ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್‍ನ ಡೆಸಿನಿಯಲ್ ಮೆಮೋರಿಯಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಜಿಲ್ಲಾಧಿಕಾರಿ ಮುಲ್ಲೈ ಮುಗಲನ್ ಎಂ.ಪಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಸಂಪನ್ಮೂಲ ವ್ಯಕ್ತಿಯಾಗಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಮನೋರೋಗ ವಿಭಾಗ ಮುಖ್ಯಸ್ಥರು ಡಾ.ಸುಪ್ರಿಯ ಹೆಗ್ಡೆ, ಪ್ರಾಧ್ಯಾಪಕ ಡಾ.ಸಿದ್ದಾರ್ಥ್ ಶೆಟ್ಟಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top