ಪುತ್ತೂರು: ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಆಕಸ್ಮಿಕ ಅಪಾಯದಿಂದ ಪಾರಾದ ರೋಗಿಗಳು    

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 11.  ಖಾಸಗಿ ಆಸ್ಪತ್ರೆಯ ವಿದ್ಯುತ್ ಸಂಪರ್ಕ ವ್ಯವಸ್ಥೆಯಲ್ಲಿ ಬೆಳಗ್ಗಿನ ಜಾವ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ಸಿಯಾಗಿದ್ದಾರೆ.

ಬೊಳುವಾರಿನ ಮುಖ್ಯ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗಿನ ಜಾವ 5ಗಂಟೆ ಸುಮಾರಿಗೆ ವಿದ್ಯುತ್ ಮೀಟರ್ ಬೋರ್ಡ್‌ನ ಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದೆ. ಜಂಕ್ಷನ್ ಬಾಕ್ಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಆಸ್ಪತ್ರೆಯ ತುಂಬಾ ಹೊಗೆ ತುಂಬಿಕೊಂಡಿದ್ದು, ತಕ್ಷಣ ಆಗ್ನಿಶಾಮಕ ದಳದವರು ಆಗಮಿಸಿ ಮುನ್ನೆಚ್ಚರಿಕೆಯನ್ನು ತೆಗೆದುಕೊಂಡಿದ್ದಾರೆ. ರೋಗಿಗಳಿಗೆ ಯಾವುದೇ ಸಮಸ್ಯೆಯಾಗಿಲ್ಲ ಎಂದು ವರದಿ ತಿಳಿಸಿದೆ.

Also Read  ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕೆ ಕ್ಷಣಗಣನೆ ► ಫಲಿತಾಂಶ ಪಡೆಯಲು ಕ್ಲಿಕ್ ಮಾಡಿ

                                   

 

error: Content is protected !!
Scroll to Top