ಲೋ ಬಿಪಿ- ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com ರಾಯಚೂರು, ಸೆ. 11. ಲೋ ಬಿಪಿ ಉಂಟಾಗಿ ಕುಸಿದುಬಿದ್ದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ರಾಯಚೂರಿನಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ತರುಣಕುಮಾರ್ ಎಂದು ಗುರುತಿಸಲಾಗಿದೆ. ಶಾಲೆಯಲ್ಲಿ ಕುಸಿದುಬಿದ್ದ ವಿದ್ಯಾರ್ಥಿಯನ್ನು ಶಾಲಾ ಆಡಳಿತ ಮಂಡಳಿಯವರು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸುವ ವೇಳೆ ದಾರಿಮಧ್ಯೆ ಬಾಲಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.

error: Content is protected !!
Scroll to Top