(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 12. ಸೆಪ್ಟೆಂಬರ್ 22ರಂದು ನಿಗದಿಯಾಗಿದ್ದ 402 ಪಿಎಸ್ ಐ ನೇಮಕಾತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದ್ದು, ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಪಿಎಸ್ಐ ಪರೀಕ್ಷೆಯನ್ನು ಸೆ. 28 ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಈ ಮೂಲಕ ಅಭ್ಯರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಇತ್ತೀಚೆಗಷ್ಟೇ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು ಹಾಗೂ ಪರೀಕ್ಷಾರ್ಥಿಗಳು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ಬೆಂಗಳೂರಿನ ಸದಾಶಿವನಗರದ ಸರಕಾರಿ ನಿವಾಸಕ್ಕೆ ಭೇಟಿ ನೀಡಿ ಪಿಎಸ್‍ಐ ಪರೀಕ್ಷೆಯನ್ನು ಮುಂದೂಡಬೇಕೆಂದು ಮನವಿ ಸಲ್ಲಿಸಿದ್ದರು.