ನೋಟರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 12.  ಜಿಲ್ಲೆಯ ಬೈಂದೂರು ತಾಲೂಕಿಗೆ ಹೊಸದಾಗಿ ಸೃಜಿಸಲಾದ ಎರಡು ನೋಟರಿ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ. ವಕೀಲ ವೃತ್ತಿಯಲ್ಲಿ ಕನಿಷ್ಠ ಹತ್ತು ವರ್ಷಗಳ ಅನುಭವ ಹೊಂದಿರುವವರು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ವರ್ಗಗಳ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ವಕೀಲ ವೃತ್ತಿಯಲ್ಲಿ ಕನಿಷ್ಟ ಏಳು ವರ್ಷಗಳ ಅನುಭವ ಇರುವವರು ಸೆ.27ರೊಳಗೆ ಅರ್ಜಿ ಸಲ್ಲಿಸಬಹುದು.


ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ, ಉಡುಪಿ ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ನ್ಯಾಯಾಧೀಶರ ಕಚೇರಿ ಪ್ರಕಟಣೆ ತಿಳಿಸಿದೆ.

Also Read  ಮಂಗಳೂರು: ಕಟ್ಟಡದ ಮೇಲಿದ್ದ ಬೃಹತ್ ಹೋರ್ಡಿಂಗ್ ಬಿದ್ದು ವಾಹನಗಳಿಗೆ ಹಾನಿ

 

error: Content is protected !!
Scroll to Top