ಉಡುಪಿ: ಸೆ.22 ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 12.  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸ್ತುತ ಸಾಲಿನ ಉಡುಪಿ ಮತ್ತು ಬ್ರಹ್ಮಾವರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ನಗರದ ಅಜ್ಜರ ಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ, ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟವು ಹೆಜಮಾಡಿ ಕ್ರೀಡಾಂಗಣದಲ್ಲಿ, ಕುಂದಾಪುರ ಮತ್ತು ಬೈಂದೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಕುಂದಾಪುರ ತಾಲೂಕು ಕ್ರೀಡಾಂಗಣದಲ್ಲಿ ಹಾಗೂ ಕಾರ್ಕಳ ಮತ್ತು ಹೆಬ್ರಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಕಾರ್ಕಳ ತಾಲೂಕು ಕ್ರೀಡಾಂಗಣದಲ್ಲಿ ಸೆಪ್ಟಂಬರ್ 22ರಂದು ನಡೆಯಲಿದೆ.


ಸ್ಪರ್ಧೆಗಳ ವಿವರ: ಪುರುಷರಿಗೆ: ಅಥ್ಲೆಟಿಕ್ಸ್( 100ಮೀ, 200 ಮೀ, 400 ಮೀ, 800 ಮೀ, 1500 ಮೀ, 5000 ಮೀ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡೆಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 110 ಮೀ ಹರ್ಡಲ್ಸ್, 4*100 ಮೀ ರಿಲೇ, 4*400 ಮೀ ರಿಲೇ.), ಗುಂಪು ಆಟಗಳಾದ ವಾಲಿಬಾಲ್, ಖೋ-ಖೋ, ಕಬಡ್ಡಿ, ಫುಟ್‌ಬಾಲ್ ಹಾಗೂ ಥ್ರೋಬಾಲ್ ಸ್ಪರ್ಧೆಗಳು ನಡೆಯಲಿವೆ.
ಮಹಿಳೆಯರಿಗೆ: ಅಥ್ಲೆಟಿಕ್ಸ್ ( 100ಮೀ, 200 ಮೀ, 400 ಮೀ, 800 ಮೀ, 1500ಮೀ, 3000ಮೀ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡೆಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 100ಮೀ ಹರ್ಡಲ್ಸ್, 4*100ಮೀ ರಿಲೇ, 4*400ಮೀ ರಿಲೇ.), ಗುಂಪು ಆಟಗಳಾದ ವಾಲಿಬಾಲ್, ಖೋ-ಖೋ, ಕಬಡ್ಡಿ ಹಾಗೂ ಥ್ರೋಬಾಲ್ ಸ್ಪರ್ಧೆಗಳು ನಡೆಯಲಿವೆ. ಭಾಗವಹಿಸುವ ಸ್ಪರ್ಧಿಗಳು ಅಂದು ಬೆಳಗ್ಗೆ 9 ಗಂಟೆಯೊಳಗೆ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬೇಕು.

Also Read  ಪ್ರಧಾನಿ ಭೇಟಿ ವೇಳೆ ಭದ್ರತಾ ವೈಫಲ್ಯ➤ ಪೊಲೀಸರ ವಿರುದ್ದ ಶಿಸ್ತುಕ್ರಮ

 

error: Content is protected !!
Scroll to Top