ನೆಲ್ಯಾಡಿ: ಭಾರೀ ಗಾಳಿ-ಮಳೆ ; 4 ಮನೆಗಳಿಗೆ ಹಾನಿ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ. 12. ಬುಧವಾರ ರಾತ್ರಿ ಬೀಸಿದ ಭಾರೀ ಗಾಳಿ ಮಳೆಗೆ 4 ಮನೆಗಳ ಛಾವಣಿ ಹಾನಿಗೀಡಾಗಿ 2 ವಿದ್ಯುತ್‌ ಕಂಬಗಳು ಮುರಿದುಬಿದ್ದ ಘಟನೆ ನೆಲ್ಯಾಡಿ ಜನತಾ ಕಾಲನಿಯಲ್ಲಿ ನಡೆದಿದೆ.

ನೆಲ್ಯಾಡಿ ಸಂತ ಜಾರ್ಜ್‌ ಪದವಿ ಪೂರ್ವ ಕಾಲೇಜಿನ ಬಳಿ ಇರುವ ಕಾಲನಿಯ ನಿವಾಸಿಗಳಾದ ಐತ್ತಪ್ಪ, ಇಸುಬು, ಬಾಬು ಆಚಾರಿ ಹಾಗೂ ಲೋಕೇಶ್‌ ಎಂಬವರ ಮನೆ ಮೇಲ್ಛಾವಣಿಯು ಗಾಳಿಯ ವೇಗಕ್ಕೆ ಸಿಲುಕಿ ಹಾನಿಗೀಡಾಗಿದ್ದು, ಸಮೀಪದಲ್ಲಿದ್ದ ಎರಡು ವಿದ್ಯುತ್‌ ಕಂಬಗಳು ಮುರಿದು ಬಿದ್ದಿದೆ. ಘಟನಾ ಸ್ಥಳಕ್ಕೆ ಗ್ರಾಮ ಪಂಚಾಯತ್‌ ಅಧ್ಯಕ್ಷ, ಕಂದಾಯ ಇಲಾಖಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top