ಸಾಧನೆ ಮಾಡಿದ ಮಕ್ಕಳಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. 2024-25ನೇ ಸಾಲಿನ ಜಿಲ್ಲಾಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಯೋಜನೆಯಡಿ ನಾವಿನ್ಯತೆ, ತಾರ್ಕಿಕ, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಮಕ್ಕಳಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಪ್ರತಿಕ್ಷೇತ್ರದಲ್ಲಿ ಇಬ್ಬರು ಮಕ್ಕಳಂತೆ ಒಟ್ಟು 8 ಮಕ್ಕಳನ್ನು ಆಯ್ಕೆಮಾಡಿ ಆಯ್ಕೆಯಾದ ಪ್ರತಿ ಮಗುವಿಗೆ ರೂ. 10,000 ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಮಕ್ಕಳ ವಯಸ್ಸು 8ರಿಂದ 18 ವರ್ಷದೊಳಗಿರಬೇಕು. ಜನನ ಪ್ರಮಾಣ ಪತ್ರವನ್ನು ಗೆಜೆಟೆಡ್ ಅಧಿಕಾರಿಯಿಂದ ದೃಢೀಕರಿಸಲ್ಪಟ್ಟಿರಬೇಕು. ಈ ಹಿಂದಿನ ವರ್ಷಗಳಲ್ಲಿ ಜಿಲ್ಲಾಮಟ್ಟದ ಪ್ರಶಸ್ತಿ ಪಡೆದ ಮಕ್ಕಳಿಗೆ ಮತ್ತೊಮ್ಮೆ  ಪ್ರಶಸ್ತಿ ನೀಡಲು ಅವಕಾಶವಿರುವುದಿಲ್ಲ. ಪ್ರಶಸ್ತಿಗೆ ಆಯ್ಕೆ ಮಾಡುವಂತಹ ಮಕ್ಕಳು ಅಪ್ರತಿಮ ಸಾಧನೆ ಮಾಡಿರಬೇಕು, ಅಸಾಧಾರಣವೆಂದು ಇವರ ಸಾಧನೆಯನ್ನು ಸಮರ್ಥಿಸಲು ಪೂರಕ ದಾಖಲೆಗಳನ್ನು ಒದಗಿಸಬೇಕು. ಪ್ರಸ್ತಾವನೆಯನ್ನು ಅಕ್ಟೋಬರ್ 8 ರೊಳಗೆ ನಿಗದಿತ ನಮೂನೆಯಲ್ಲಿ ಸೂಕ್ತ ದಾಖಲೆಗಳೊಂದಿಗೆ ಉಪನಿರ್ದೇಶಕರ ಕಚೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಸ್ತ್ರೀ ಶಕ್ತಿ ಭವನ, ಎರಡನೇ ಮಹಡಿ ಮೆಸ್ಕಾಂ ಬಳಿ ಬಿಜೈ ಮಂಗಳೂರು ಕಚೇರಿಗೆ ನೀಡಬೇಕು. ಹೆಚ್ಚಿನ ಮಾಹಿತಿಗೆ ಹಾಗೂ ಅರ್ಜಿ ನಮೂನೆಗಾಗಿ  ದೂರವಾಣಿ ಸಂಖ್ಯೆ: 0824-2451254 ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಇಂದು ವಸತಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ

error: Content is protected !!
Scroll to Top