ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ: 50 ಮಂದಿ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ. 12.  ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಾಗಮಂಗಲದಲ್ಲಿ ಉಂಟಾಗಿದ್ದ ಪ್ರಕ್ಷುಬ್ಧ ಪರಿಸ್ಥಿತಿ ಹತೋಟಿಗೆ ಬಂದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪಟ್ಟಣದಲ್ಲಿ ಮೂರು ದಿವಸಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.


ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ಆಯಕಟ್ಟಿನ ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 50 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಗಣೇಶನ ಮೆರವಣಿಗೆಯು ದರ್ಗಾದ ಎದುರು ಹೆಚ್ಚು ಹೊತ್ತು ನಿಂತಿದ್ದರಿಂದ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಕಲ್ಲು ತೂರಾಟ ನಡೆದಿದೆ. ಹಲವು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ. ಕೆಲವು ದ್ವಿಚಕ್ರ ವಾಹನಗಳಿಗೆ ಹಾನಿಯಾಗಿದೆ. ಆದರೆ ಪೊಲೀಸರಿಗೆ ಅಥವಾ ಸಾರ್ವಜನಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ವರದಿ ತಿಳಿಸಿದೆ.

Also Read  ಸೇತುವೆಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

 

 

error: Content is protected !!
Scroll to Top