ತುಳು ತಿಗಳಾರಿ ಲಿಪಿಗೆ ಯುನಿಕೋಡ್ ಅನುಮೋದನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ತುಳು ತಿಗಳಾರಿ ಲಿಪಿಗೆ ಯುನಿಕೋಡ್ ಅನುಮೋದನೆ ನೀಡಿರುವ ವಿಚಾರ ಈಗಾಗಲೇ ಪ್ರಕಟಗೊಂಡಿದ್ದು, ಸಂಶೋಧಕಿ ವೈಷ್ಣವಿ ಮೂರ್ತಿ ಹಾಗೂ ವಿನೋದ್ ರಾಜನ್ ಅವರು ದಾಖಲೆ ಸಮೇತ ಸಲ್ಲಿಸಿದ ಪ್ರಸ್ತಾವನೆಗೆ ಈ ಅನುಮೋದನೆ ನೀಡಲಾಗಿದೆ ಎಂಬುದನ್ನು ಯುನಿಕೋಡ್ ತನ್ನ ಅಂತರ್ಜಾಲ ಮಾಹಿತಿಯಲ್ಲಿ ಉಲ್ಲೇಖಿಸಿದೆ.

ವೈಷ್ಣವಿ ಮೂರ್ತಿ ಹಾಗೂ ವಿನೋದ್ ರಾಜನ್ ಅವರ ಪ್ರಯತ್ನ ಶ್ಲಾಘನೀಯ. ಸುದೀರ್ಘ ಅವಧಿಯಲ್ಲಿ ಸಾಕಷ್ಟು ದಾಖಲೆಗಳನ್ನು ಲಗತ್ತಿಸಿ ಅವರು ಸಲ್ಲಿಸಿದ ಪ್ರಸ್ತಾವನೆಯ ಹಿಂದೆ ದೊಡ್ಡ ಪರಿಶ್ರಮ ಇದೆ. ಇದೇ ಸಂದರ್ಭದಲ್ಲಿ ಯುನಿಕೋಡ್ ನಲ್ಲಿ ತುಳುವನ್ನು ಮಾತ್ರ ಉಲ್ಲೇಖಿಸಿ ಪ್ರತ್ಯೇಕವಾಗಿ ತುಳು ಎಂದಷ್ಟೇ ಉಲ್ಲೇಖಿಸಿ ಅನುಮೋದನೆ ನೀಡಬೇಕೆಂಬ ಪ್ರಸ್ತಾವನೆ, ಬೇಡಿಕೆಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸಹಕಾರ ಇದೆ. ತುಳು-ತಿಗಾಳಾರಿ ನಡುವಿನ ಸಾಮ್ಯತೆ, ವ್ಯತ್ಯಾಸದ ಬಗ್ಗೆ ಭಾಷಾ ಪಂಡಿತರು, ಲಿಪಿತಜ್ಞರು ಈಗಾಗಲೇ ಸಾಕಷ್ಟು ಬರೆದಿದ್ದಾರೆ, ಅಭಿಪ್ರಾಯವನ್ನು ಮಂಡಿಸಿದ್ದಾರೆ. ಈ ವಿಚಾರಗಳನ್ನು ಈ ಸಂದರ್ಭದಲ್ಲಿ ಗಮನದಲ್ಲಿರಿಸಿಕೊಳ್ಳುವುದು ಸೂಕ್ತವಾಗಿದೆ ಎಂದು ತುಳು ಸಾಹಿತ್ಯ ಅಕಾಡೆಮಿ  ಅಧ್ಯಕ್ಷ ತಾರನಾಥ ಗಟ್ಟಿ ಕಾಪಿಕಾಡ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!

Join the Group

Join WhatsApp Group