ಸುಳ್ಯ: ಲಾರಿ – ಟ್ಯಾಂಕರ್ ಮುಖಾಮುಖಿ ಢಿಕ್ಕಿ ► ಇಬ್ಬರು ಗಂಭೀರ



(ನ್ಯೂಸ್ ಕಡಬ) newskadaba.com ಸುಳ್ಯ, ಮಾ.02. ಟ್ಯಾಂಕರ್ ಹಾಗೂ ಲಾರಿ ನಡುವೆ ಢಿಕ್ಕಿ ಸಂಭವಿಸಿ ಚಾಲಕರಿಬ್ಬರು ಗಂಭೀರ ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಸುಳ್ಯ ಸಮೀಪದ ಪರಿವಾರಕಾನ ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.







ಮಂಗಳೂರಿನಿಂದ ಮಡಿಕೇರಿ ಕಡೆಗೆ ಡೀಸೆಲ್ ಹೇರಿಕೊಂಡು ತೆರಳುತ್ತಿದ್ದ ಟ್ಯಾಂಕರ್ ಹಾಗೂ ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ನಡುವೆ ಢಿಕ್ಕಿ ಸಂಭವಿಸಿ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಟ್ಯಾಂಕರ್ ರಸ್ತೆಗಡ್ಡವಾಗಿ ಮಗುಚಿ ಬಿದ್ದಿದ್ದು, ಗಾಯಾಳು ಚಾಲಕರಿಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ಯಾಂಕರ್‌ನಿಂದ ಡೀಸೆಲ್ ಹೊರ ಹರಿಯತೊಡಗಿದ್ದು ಪರಿಸರದ ಜನ ಡ್ರಮ್, ಕ್ಯಾನ್ ಬಾಟಲಿಗಳನ್ನು ತಂದು ಡೀಸೆಲ್ ಸಂಗ್ರಹಿಸುತ್ತಿದ್ದ ದೃಶ್ಯ ಕಂಡುಬಂದಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top