ಉಡುಪಿ: ಬಾಲಕರ ಭವನದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿ ಬಸ್ ನಿಲ್ದಾಣದಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 12.  ನಗರದ ಸರ್ವಿಸ್ ಬಸ್ ನಿಲ್ದಾಣದಲ್ಲಿ ಬುಧವಾರ ಶಾಲಾ ಸಮವಸ್ತ್ರದಲ್ಲಿದ್ದ ಬಾಲಕನನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ರಕ್ಷಿಸಿ, ಮಕ್ಕಳ ರಕ್ಷಣಾ ಘಟಕಕ್ಕೆ ಒಪ್ಪಿಸಿದ್ದಾರೆ. ರಕ್ಷಿಸಲ್ಪಟ್ಟ ಬಾಲಕ ದೊಡ್ಡಣಗುಡ್ಡೆಯ ಬಾಲಕರ ಬಾಲ ಭವನದಲ್ಲಿ ಆಶ್ರಯ ಪಡೆದಿದ್ದು, ನಿಟ್ಟೂರಿನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 3 ನೇ ತರಗತಿ ವಿದ್ಯಾರ್ಥಿ ಎಂದು ತಿಳಿದುಬಂದಿದೆ.

ಬಾಲಕರ ಭವನದಿಂದ ಶಾಲೆಗೆಂದು ತೆರಳಿದ ಈತ, ಶಾಲೆಗೆ ಹೋಗದೆ, ಮರಳಿ ಬಾಲಕರ ಭವನಕ್ಕೂ ಬಾರದೆ ನಾಪತ್ತೆಯಾಗಿದ್ದನು. ಬಾಲಕನ ಅನುಮಾನಸ್ಪದ ಚಲನವಲನ ಗಮನಿಸಿದ ಸಮಾಜಸೇವಕ ನಿತ್ಯಾನಂದ ಒಳಕಾಡು, ಬಾಲಕನನ್ನು ವಶಕ್ಕೆ ಪಡೆದು, ಬಳಿಕ ಮಕ್ಕಳ ರಕ್ಷಣಾ ಘಟಕಕ್ಕೆ ಹಸ್ತಾಂತರಿಸಿದ್ದಾರೆ. ಮಕ್ಕಳ ರಕ್ಷಣಾ ಘಟಕದ ಚಕ್ರತೀರ್ಥ, ಪ್ರಮೋದ್, ರಾಜೇಶ್ ಹಸ್ತಾಂತರ ಪ್ರಕ್ರಿಯೆಯಲ್ಲಿ ಉಪಸ್ಥಿತರಿದ್ದರು.

Also Read  ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತೋಟಗಾರಿಕೆ ಇಲಾಖಾವತಿಯಿಂದ ➤ ಟೆಂಡರ್ ಪ್ರಕಟಣೆ

 

error: Content is protected !!
Scroll to Top