100 ಹೊಸ ಬಿಎಂಟಿಸಿ ಬಸ್​ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 12.  ಬಿಎಂಟಿಸಿ 100 ಹೊಸ ಬಸ್​ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಚಾಲನೆ ನೀಡಿದರು. ವಿಧಾನಸೌಧ ಆವರಣದಲ್ಲಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂತನ ಬಿಎಂಟಿಸಿ ಬಸ್ ಗಳನ್ನು ಮುಖ್ಯಮಂತ್ರಿಗಳು ಲೋಕಾರ್ಪಣೆಗೊಳಿಸಿದರು.

ವಿಧಾನಸೌಧ ಆವರಣದಲ್ಲಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂತನ ಬಿಎಂಟಿಸಿ ಬಸ್ ಗಳನ್ನು ಮುಖ್ಯಮಂತ್ರಿಗಳು ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿ ಅವರು, ಬೆಂಗಳೂರು ನಗರದ ಜನತೆಯ ಅನುಕೂಲಕ್ಕೆ ಮೊದಲ ಹಂತದ 100 ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಇಲ್ಲಿನ ಹೆಚ್ಚುತ್ತಿರುವ ಶ್ರಮಿಕ ವರ್ಗಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ನೂತನ‌ ಬಸ್​ಗಳನ್ನು ಬಿಎಂಟಿಸಿಗೆ ಸೇರ್ಪಡೆಗೊಳಿಸುವ ಜೊತೆಗೆ ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ ಇಂದಿರಾ ಕ್ಯಾಂಟೀನ್​ಗಳನ್ನು ಆರಂಭಿಸಲಾಗಿದೆ. ಅಲ್ಲದೆ, ನೂತನವಾಗಿ ಇನ್ನಷ್ಟು ಕ್ಯಾಂಟೀನ್​ಗಳನ್ನು ಆರಂಭಿಸುತ್ತಿದ್ದೇವೆಂದು ಹೇಳಿದರು.

Also Read  ಕರಾವಳಿಯಲ್ಲಿ ಏರಿಕೆ ಕಂಡ ಕೊರೋನಾ ಸೋಂಕು ➤ ದಕ್ಷಿಣ ಕನ್ನಡದಲ್ಲಿ ಇಂದು ರಾಜ್ಯದಲ್ಲೇ ಅತ್ಯಧಿಕ ಪಾಸಿಟಿವ್

 

error: Content is protected !!
Scroll to Top