(ನ್ಯೂಸ್ ಕಡಬ) newskadaba.com ಚಾಮರಾಜನಗರ, ಸೆ. 12. ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಸುಮಾರು 27 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದ್ದ ಆರೋಪಿ ಮಹಿಳೆಯನ್ನು ಪತ್ತೆಹಚ್ಚಿ, 432 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ತಿಳಿಸಿದ್ದಾರೆ.
ಆರೋಪಿ ಮಹಿಳೆಯನ್ನು ತಮಿಳುನಾಡಿನ ಲಕ್ಷ್ಮೀ(43) ಎಂದು ಗುರುತಿಸಲಾಗಿದೆ. ಈಕೆಯಿಂದ 432 ಗ್ರಾಂ. ಚಿನ್ನಾಭರಣವನ್ನು ವಶಪಡಿಸಿಕೊಂಡು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದರು. ದೂರು ದಾಖಲಿಸಿಕೊಂಡ ಚಾಮರಾಜನಗರ ಪಟ್ಟಣ ಠಾಣೆಯ ಪೊಲೀಸರು, ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ.ಕವಿತಾ ಹಾಗೂ ಡಿವೈಎಸ್ಪಿ ಲಕ್ಷ್ಮಯ್ಯ ಅವರ ಮಾರ್ಗದರ್ಶದಲ್ಲಿ ಕಾರ್ಯಾಚರಣೆ ಆರಂಭಿಸಿದರು. ಬಸ್ ನಿಲ್ದಾಣದಲ್ಲಿದ್ದ ಸಿಸಿ ಕ್ಯಾಮರಾವನ್ನು ಪರಿಶೀಲಿಸಿದ ವೇಳೆ ಪುಷ್ಟಲತಾ ರವರ ಬ್ಯಾಗ್ ನಿಂದ ಕಳ್ಳತನ ಮಾಡಿದ ತಮಿಳುನಾಡಿನ ಲಕ್ಷ್ಮೀ ಎಂಬ ಮಹಿಳೆ ಆಟೋವೊಂದರಲ್ಲಿ ತಮಿಳುನಾಡಿನ ತಾಳವಾಡಿ ಕಡೆ ಹೋಗಿರುವ ಮಾಹಿತಿ ಆಧರಿಸಿ ಪೊಲೀಸರು ಮಹಿಳೆಯನ್ನು ಪತ್ತೆಹಚ್ಚಿ ಬಂಧಿಸಿದರು ಎನ್ನಲಾಗಿದೆ.