900 ಕೆ.ಜಿ.ಪಡಿತರ ಅಕ್ಕಿಯ ಅಕ್ರಮ ಸಾಗಾಟ: ಇಬ್ಬರು ಅರೆಸ್ಟ್..!

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಸೆ. 12.  ಅಕ್ರಮವಾಗಿ ಸಾಗಿಸುತ್ತಿದ್ದ 900 ಕೆ.ಜಿ.ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದಿರುವ ಪಟ್ಟಣ ಠಾಣೆ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ನಗರದ ಬೈಪಾಸ್ ರಸ್ತೆಯಲ್ಲಿ ಬುಧವಾರ ರಾತ್ರಿ ನಡೆದಿದೆ.
ಆರೋಪಿಗಳನ್ನು ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಹಳೇ ನರಿಪುರ ಗ್ರಾಮದ ಇಮ್ರಾನ್ ಅಲಿ(39) ಹಾಗೂ ಗರ್ಗೇಶ್ವರಿಯ ಮುಹಮ್ಮದ್ ಸಲ್ಮಾನ್ (20) ಎಂದು ಗುರುತಿಸಲಾಗಿದೆ.

ಆರೋಪಿಗಳು ಚಾಮರಾಜನಗರದ ಗಾಳೀಪುರ ಕಡೆಯಿಂದ ಬೈಪಾಸ್‌ ರಸ್ತೆಯಲ್ಲಿ ಟಿ.ನರಸೀಪುರಕ್ಕೆ ಟಾಟಾ ಏಸ್ ವಾಹನದಲ್ಲಿ 19 ಪ್ಲಾಸ್ಟಿಕ್ ಚೀಲಗಳಲ್ಲಿ ಅಂದಾಜು 900 ಕೆ. ಜಿ.ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದರು ಎನ್ನಲಾಗಿದೆ. ಈ ವೇಳೆ ವಾಹನವನ್ನು ನಿಲ್ಲಿಸಿ ಪರಾರಿಯಾಗುತ್ತಿದ್ದ ಇಬ್ಬರನ್ನು ಬಂಧಿಸಿ, ಪಡಿತರ ಅಕ್ಕಿ- ವಾಹನವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಕರ್ನಾಟಕ ಬಂದ್ ಮಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ ➤ ಎಂದಿನಂತೆ ಜನಜೀವನ

 

error: Content is protected !!
Scroll to Top