ಮಂಗಳೂರು: ಮನೆ ಗೋಡೆ ಕುಸಿದು ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ನಗರದ ಜೈಲು‌ ರಸ್ತೆಯ ಬಳಿ ಹಳೆ ಮನೆಯೊಂದನ್ನು ಕೆಡವುತ್ತಿದ್ದ ವೇಳೆ ಗೋಡೆ ಕುಸಿದು ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

ಮೃತ ದುರ್ದೈವಿಗಳನ್ನು ಜೇಮ್ಸ್ ಸ್ಯಾಮುವೆಲ್ ಜತ್ತನ್ನ ಮತ್ತು ಅಡ್ವಿನ್ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಜೆಸಿಬಿ ಮೂಲಕ ಮನೆಯನ್ನು ಕೆಡವುತ್ತಿದ್ದ ವೇಳೆ ಕಾಂಕ್ರೀಟ್ ಲಿಂಟೆಲ್ ಸಹಿತ ಗೋಡೆ ಮೈಮೇಲೆ ಬಿದ್ದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

error: Content is protected !!

Join the Group

Join WhatsApp Group