ಉಡುಪಿ: ಯುವಕ ನಾಪತ್ತೆ..!



(ನ್ಯೂಸ್ ಕಡಬ) newskadaba.com ಉಡುಪಿ, ಸೆ. 13.  ಇಲ್ಲಿನ ಬನ್ನಂಜೆಯ ನಿವಾಸಿ ನಾಗಪ್ಪ ನಡುವಿನಮನೆ (31) ಎಂಬ ಯುವಕ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.







5 ಅಡಿ 4 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ದುಂಡುಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.






 

 

error: Content is protected !!
Scroll to Top