ಬಸ್ ಫುಟ್ಬೋರ್ಡ್ ನಿಂದ ಬಿದ್ದ ವಿದ್ಯಾರ್ಥಿ..!



(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ಬಸ್ಸಿನ ಫುಟ್ ಬೋರ್ಡಲ್ಲಿ ನೇತಾಡುತ್ತಿದ್ದ ವಿದ್ಯಾರ್ಥಿಯೊಬ್ಬ ರಸ್ತೆಗೆಸೆಯಲ್ಪಟ್ಟ ಘಟನೆ ತೊಕ್ಕೊಟ್ಟು ಮೇಲ್ಸೆತುವೆ ಬಳಿ ನಡೆದಿದೆ.







ತಲಪಾಡಿಯಿಂದ ಮಂಗಳೂರಿಗೆ ಬರುತ್ತಿದ್ದ ಸಿಟಿ ಬಸ್ಸೊಂದು ಪ್ರಯಾಣಿಕರನ್ನು ತುಂಬಿಸಿಕೊಂಡು ಬರುತ್ತಿದ್ದಾಗ ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಚಾಲಕ ದಿಢೀರ್‌ ಬ್ರೇಕ್‌ ಹಾಕಿದ ಪರಿಣಾಮ ಫುಟ್‌ಬೋರ್ಡ್‌ನಲ್ಲಿ ನೇತಾಡುತ್ತಿದ್ದ ವಿದ್ಯಾರ್ಥಿ ಬಸ್ಸಿನಿಂದ ಕೆಳಕ್ಕೆ ಬಿದ್ದಿದ್ದಾನೆ ಎನ್ನಲಾಗಿದೆ. ಘಟನೆಯಲ್ಲಿ ವಿದ್ಯಾರ್ಥಿ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.






error: Content is protected !!
Scroll to Top