70 ವರ್ಷ ಮೇಲ್ಪಟ್ಟ ನಾಗರೀಕರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ – ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 13. ಇನ್ನುಮುಂದೆ 70 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡುವುದಾಗಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಪ್ರಕಟಿಸಿದೆ.

ಈ ಕುರಿತು ಮಾತನಾಡಿದ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಮಾತನಾಡಿ, 70 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರನ್ನು ಸಾರ್ವತ್ರಿಕ ಆರೋಗ್ಯ ವ್ಯಾಪ್ತಿಯಾದ ಆಯುಷ್ಮಾನ್ ಭಾರತ್ ಪಿಎಂ ಜನ ಆರೋಗ್ಯ ಯೋಜನೆ ಅಡಿಯಲ್ಲಿ ಒಳಗೊಳ್ಳಲು ಕೇಂದ್ರ ನಿರ್ಧರಿಸಿದೆ ಎಂದು ಹೇಳಿದ್ದಾರೆ. ಆಯುಷ್ಮಾನ್ ಭಾರತ್‌ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (AB PM-JAY) ಅಡಿಯಲ್ಲಿ 70 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ಹಿರಿಯ ನಾಗರಿಕರಿಗೆ ಅವರ ಆದಾಯವನ್ನು ಲೆಕ್ಕಿಸದೆ 5 ಲಕ್ಷ ರೂ. ಆರೋಗ್ಯ ರಕ್ಷಣೆಯನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ. ಇದೊಂದು ಮಹತ್ವದ ನಿರ್ಧಾರ. ಈ ನಿರ್ಧಾರದಲ್ಲಿರೋಗಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ಸೌಲಭ್ಯ ಸಿಗಲಿದೆ ಮತ್ತು ಇದು ದೇಶದ ಸುಮಾರು 4.5 ಕೋಟಿ ಕುಟುಂಬಗಳನ್ನು ಒಳಗೊಳ್ಳುತ್ತದೆ. ಇದರಲ್ಲಿ ಸುಮಾರು 6 ಕೋಟಿ ಹಿರಿಯ ನಾಗರಿಕರು ಸೇರಿದ್ದಾರೆ. ಎಂದು ಸಚಿವ ಅಶ್ವಿನ್ ವೈಷ್ಣವ್ ಹೇಳಿದ್ದಾರೆ.

Also Read  ಮಕ್ಕಳನ್ನು ಕೊಂದು ದಂಪತಿಗಳಿಬ್ಬರು ಆತ್ಮಹತ್ಯೆ

 

error: Content is protected !!
Scroll to Top