(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮವು ಸೆಪ್ಟೆಂಬರ್ 17ರಂದು ಮಂಗಳವಾರ ಮಧ್ಯಾಹ್ನ 3.30 ಗಂಟೆಗೆ ಮಂಗಳೂರಿನ ರಥಬೀದಿಯಲ್ಲಿರುವ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನದಲ್ಲಿ ನಡೆಯಲಿದೆ.
ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಅವರ ಉಪಸ್ಥಿತಿಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ್ ಕಾಮತ್ ಕಾರ್ಯಕ್ರಮದ ಅದ್ಯಕ್ಞತೆ ವಹಿಸಲಿದ್ದಾರೆ. ಶಿಕ್ಷಕ ವೆಂಕಟರಮಣ ಪಾಂಡುರಂಗ ಆಚಾರ್ಯ ಉಪನ್ಯಾಸ ನೀಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.