ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸೀಮೆಎಣ್ಣೆ ಕುಡಿದು ವ್ಯಕ್ತಿ ಮೃತ್ಯು..!



(ನ್ಯೂಸ್ ಕಡಬ) newskadaba.com ಮಲ್ಪೆ, ಸೆ. 13.  ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಬಾಯಿಗೆ ಸೀಮೆಎಣ್ಣೆ ಹಾಕಿ ಬೆಂಕಿ ಉಗುಳುತ್ತಿದ್ದ ವ್ಯಕ್ತಿಯೊಬ್ಬರು ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ತೊಟ್ಟಂ ಎಂಬಲ್ಲಿ ನಡೆದಿದೆ.







ಮೃತರನ್ನು ಮಲ್ಪೆಯ ಸತೀಶ(39) ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದು ಸೆ.9ರಂದು ರಾತ್ರಿ ತೊಟ್ಟಂನ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಬಾಯಿಗೆ ಸೀಮೆಎಣ್ಣೆ ಹಾಕಿಕೊಂಡು ಬೆಂಕಿ ಉಗುಳುತ್ತಿದ್ದರು. ಈ ವೇಳೆ ಅವರು ಆಕಸ್ಮಿಕವಾಗಿ ಸೀಮೆಎಣ್ಣೆ ಕುಡಿದ ಪರಿಣಾಮ ತೀವ್ರವಾಗಿ ಅಸ್ವಸ್ಥಗೊಂಡರೆನ್ನಲಾಗಿದೆ. ಸೆ.10ರಂದು ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಸೆ.12ರಂದು ನಸುಕಿನ ವೇಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






 

error: Content is protected !!
Scroll to Top