ಮಾದಕ ವಸ್ತು ಗಾಂಜಾ ಮಾರಾಟ: ಇಬ್ಬರು ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13.  ಒರಿಸ್ಸಾದಿಂದ ಮಂಗಳೂರು ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ/ಮಾರಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 8.650 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

ಮಂಗಳೂರು ನಗರದ ಕರ್ನಾಟಕ-ಕೇರಳ ಗಡಿ ಪ್ರದೇಶದ ತಲಪಾಡಿ ದೇವಿಪುರ ರಸ್ತೆಯ ತಚ್ಚಾಣಿ ಪರಿಸರದಲ್ಲಿ ಅಕ್ರಮವಾಗಿ ಗಾಂಜಾ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಒರಿಸ್ಸಾದ ಬುಲುಬಿರೊ(24) ಹಾಗೂ ಪಶ್ಚಿಮ ಬಂಗಾಳದ ದಿಲ್ ದಾರ್ ಆಲಿ (28) ಎಂಬವರನ್ನು ವಶಕ್ಕೆ ಪಡೆದುಕೊಂಡು  ಅವರ ವಶದಿಂದ 2,60,000/- ರೂ ಮೌಲ್ಯದ 8 ಕೆಜಿ 650 ಗ್ರಾಂ ನಿಷೇಧಿತ ಮಾದಕ ವಸ್ತು ಗಾಂಜಾ, 2 ಮೊಬೈಲ್ ಫೋನುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 3 ಲಕ್ಷ ಆಗಬಹುದು. ಈ ಬಗ್ಗೆ  ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Also Read  ನೀರು ಕುಡಿಯಲು ಕೃಷ್ಣ ನದಿಗೆ ಇಳಿದಿದ್ದ ಯುವಕನನ್ನು ಎಳೆದೊಯ್ದು ತಿಂದು ಹಾಕಿದ ಮೊಸಳೆ

 

error: Content is protected !!
Scroll to Top