ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್ – ಬಾಂಗ್ಲಾ ಪ್ರಜೆ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 13. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ ಆರೋಪದ ಮೇರೆಗೆ ಬಾಂಗ್ಲಾದೇಶದ ಪ್ರಜೆಯೋರ್ವನ ವಿರುದ್ದ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಿಸಿರುವ ಕುರಿತು ವರದಿಯಾಗಿದೆ. ಬಾಂಗ್ಲಾದೇಶದ ಪ್ರಜೆ ಸಲಾಲುದ್ದೀನ್ ಸುಹೇಬ್ ಚೌಧರಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ವರದಿಯ ಪ್ರಕಾರ ಸಲಾಲುದ್ದೀನ್ ಸುಹೇಬ್, ‘ಸೋನಿಯಾಗಾಂಧಿ ಅಂತರ್ ಧರ್ಮ ವಿವಾಹವಾಗಿದ್ದಾರೆ. ಕ್ರಿಶ್ಚಿಯನ್ ಧರ್ಮವನ್ನೇ ಪಾಲನೆ ಮಾಡುತ್ತಿರುವ ಅವರು ಅಂತರ್ ಧರ್ಮದಲ್ಲಿ ಮದುವೆಯಾಗಿ ಭಾರತದ ಪೌರತ್ವ ಪಡೆದಿದ್ದಾರೆ. ರಾಹುಲ್ ಗಾಂಧಿ ವಿದೇಶಿ ಸ್ನೇಹಿತರ ಜೊತೆ ಸೇರಿಕೊಂಡು ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮಾಡಿದ್ದಾರೆ’ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ ಎನ್ನಲಾಗಿದೆ. ಈ ರೀತಿ ಪೋಸ್ಟ್ ಮಾಡುವ ಸಲಾಲುದ್ದೀನ್ ಸುಹೇಬ್, ಕೋಮು ಸೌಹಾರ್ದತೆಗೆ ಧಕ್ಕೆ, ಶಾಂತಿ ಕದಡಲು ಪ್ರಯತ್ನಿಸಿದ ಆರೋಪದಲ್ಲಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

error: Content is protected !!
Scroll to Top