ಬಂಟ್ವಾಳ: ಬೈಕ್, ಓಮ್ನಿ ಹಾಗೂ ಕಂಟೈನರ್ ನಡುವೆ ಸರಣಿ ಅಪಘಾತ ► ನಾಲ್ವರಿಗೆ ಗಾಯ



(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ.02. ಬೈಕ್, ಓಮ್ನಿ ಹಾಗೂ ಕಂಟೈನರ್ ಲಾರಿ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರು ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡ್ ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ.







ಬಿ.ಸಿ.ರೋಡ್ ಸರ್ಕಲ್ ನಲ್ಲಿ ಬೈಕ್ ಹಾಗೂ ಓಮ್ನಿ ನಡುವೆ ಢಿಕ್ಕಿಯಾದ ಕಾರಣ ರಸ್ತೆಯಲ್ಲಿ ನಿಲ್ಲಿಸಿದ್ದ ಓಮ್ನಿಗೆ ಕಂಟೈನರ್ ಲಾರಿಯೊಂದು ಹಿಂದಿನಿಂದ ಢಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಬೈಕಿನಲ್ಲಿದ್ದ ಮಗು ಸೇರಿ ಮೂವರು ಹಾಗೂ ಓಮ್ನಿ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ಬಂಟ್ವಾಳ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.






error: Content is protected !!
Scroll to Top