ದ್ವಿತೀಯ ಪಿಯು ಪರೀಕ್ಷಾ ಅವಧಿಯ 15 ನಿಮಿಷ ಕಡಿತಗೊಳಿಸಿ ಸರಕಾರ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 13. ಪರೀಕ್ಷಾ ಅವಧಿಯಲ್ಲಿ ಹದಿನೈದು ನಿಮಿಷ ಕಡಿತಗೊಳಿಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ನಿಗದಿಯಾಗಿದ್ದ ಸಮಯವನ್ನು ಈ ವರ್ಷದಿಂದ ಕಡಿತ ಮಾಡಲಾಗಿದ್ದು, ಈ ನಿಯಮ ಈ ವರ್ಷ ಅಂದರೆ 2024-25ನೇ ಸಾಲಿನ ಪರೀಕ್ಷೆಯಿಂದಲೇ ಜಾರಿಯಾಗಲಿದೆ. ಸಮಯ ಕಡಿತ ಮಾಡಿರುವ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ.

ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಇಲಾಖೆ ವೆಬ್ ಸೈಟ್ ನಲ್ಲಿ ಪ್ರಕಟ ಮಾಡಿದೆ. ದ್ವಿತೀಯ ಪಿಯುಸಿ ಪರೀಕ್ಷೆಯ ಅವಧಿಯನ್ನು 15 ನಿಮಿಷಗಳ ಕಾಲ ಇಳಿಕೆ ಮಾಡುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಘೋಷಿಸಿದೆ. ಇದರಿಂದಾಗಿ, 3 ಗಂಟೆಗಳ ಕಾಲ ಬರೆಯಬೇಕಿದ್ದ ಪರೀಕ್ಷೆ ಅವಧಿ 2 ಗಂಟೆ 45 ನಿಮಿಷಕ್ಕೆ ಇಳಿಕೆಯಾಗಲಿದೆ. ಈ ಮೊದಲು ವಿದ್ಯಾರ್ಥಿಗಳು ಉತ್ತರ ಬರೆಯಲು 3 ಗಂಟೆ 15 ನಿಮಿಷ ಸಮಯ ಕೊಡಲಾಗ್ತಿತ್ತು.3 ಗಂಟೆ ಉತ್ತರ ಬರೆಯಲು ಮತ್ತು 15 ನಿಮಿಷಗಳು ಪ್ರಶ್ನೆ ಪತ್ರಿಕೆ ಓದಲು ನೀಡಲಾಗುತ್ತಿತ್ತು. ಹೊಸ ನಿಯಮದ ಪ್ರಕಾರ ಉತ್ತರ ಬರೆಯಲು 2 ಗಂಟೆ 45 ನಿಮಿಷ ಸಮಯ ಮತ್ತು 15 ನಿಮಿಷ ಪ್ರಶ್ನೆ ಪತ್ರಿಕೆ ಓದಲು ಅವಕಾಶ ನೀಡಲಾಗಿದ್ದು, 15 ನಿಮಿಷ ಸಮಯವನ್ನು ಕಡಿತ ಮಾಡಲಾಗಿದೆ.

error: Content is protected !!

Join the Group

Join WhatsApp Group