ನೇಣು ಬಿಗಿದು ಯುವಕ ಆತ್ಮಹತ್ಯೆ..!



(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13.  ಯುವಕನೋರ್ವ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಎಂಬಲ್ಲಿ ನಡೆದಿದೆ.







ತಾರಿಪಡ್ಪು ವೈದ್ಯನಾಥ ದೇವಸ್ಥಾನದ ಬಳಿಯ ನಿವಾಸಿ ಶ್ರವಣ್ ಆಳ್ವ (25) ಆತ್ಮಹತ್ಯೆಗೈದ ಯುವಕ ವೃತ್ತಿಯಲ್ಲಿ ಆತ ಎಲೆಕ್ಟ್ರೀಶಿಯನ್ ಆಗಿದ್ದ. ಮಾಹಿತಿಗಳ ಪ್ರಕಾರ ಶ್ರವಣ್ ಗುರುವಾರ ರಾತ್ರಿ ಸ್ನೇಹಿತನ್ನು ಭೇಟಿಯಾಗಿ ಮನೆಗೆ ಬಂದು ಊಟ ಮಾಡಿ ಟಿವಿ ವೀಕ್ಷಿಸಿ ಬಳಿಕ ಮಲಗಲು ತನ್ನ ಕೋಣೆಗೆ ಹೋಗಿದ್ದು ಮಧ್ಯರಾತ್ರಿ ಶ್ರವಣ್ ಅಣ್ಣ ಕೆಲಸ ಮುಗಿಸಿ ಮನೆಗೆ ಬಂದಾಗ ಶ್ರವಣ್ ಬೆಡ್ ರೂಮಿನ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ಪೋಲಿಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ವರದಿ ತಿಳಿಸಿದೆ.






error: Content is protected !!
Scroll to Top