HSRP ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ಮುಕ್ತಾಯ – ಸೋಮವಾರದಿಂದಲೇ ದಂಡ ಫಿಕ್ಸ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 13. ರಾಜ್ಯ ಸರಕಾರ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಲು ನೀಡಿರುವ ಗಡುವು 15ರಂದು ಮುಕ್ತಾಯವಾಗಲಿದ್ದು, ಹಾಗಾಗಿ ಸೆಪ್ಟೆಂಬರ್ 16 ರಿಂದ ಹೆಚ್‌ಎಸ್‌ಆರ್ಪಿ ಅಳವಡಿಸದ ವಾಹನಗಳಿಗೆ ದಂಡ ವಿಧಿಸಲು ಸಾರಿಗೆ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.


ಇನ್ನುಮುಂದೆ HSRP ಇಲ್ಲದ ವಾಹನಗಳಿಗೆ ಎರಡು ಬಾರಿ ದಂಡ ವಿಧಿಸಿ ಮೂರನೇ ಬಾರಿಗೆ ವಾಹನ ಜಪ್ತಿ ಮಾಡುವ ಬಗ್ಗೆಯೂ ಸಾರಿಗೆ ಇಲಾಖೆ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಕೇಂದ್ರ ಸರ್ಕಾರದ ನಿರ್ದೇಶನದನ್ವಯ 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾದ ವಾಹನಗಳಿಗೆ HSRP ಅಳವಡಿಸುವುದು ಕಡ್ಡಾಯವಾಗಿದೆ. ರಾಜ್ಯದಲ್ಲಿ ಸುಮಾರು ಎರಡು ಕೋಟಿ ವಾಹನಗಳು HSRP ಅಳವಡಿಸಿಕೊಳ್ಳಬೇಕಿದೆ. ಸುಮಾರು 52 ಲಕ್ಷ ವಾಹನಗಳಿಗೆ ಮಾತ್ರ HSRP ಅಳವಡಿಸಲಾಗಿದ್ದು, ಇನ್ನೂ 1.48 ಕೋಟಿ ವಾಹನಗಳು ಹೆಚ್‌ಎಸ್‌ಆರ್ಪಿ ಅಳವಡಿಸಿಕೊಳ್ಳಬೇಕಿದೆ. ಇದುವರೆಗೆ 4 ಬಾರಿ ಗಡುವು ವಿಸ್ತರಿಸಿದ್ದರೂ ವಾಹನ ಸವಾರರು ಆಸಕ್ತಿ ತೋರಿಸದ ಕಾರಣ ಸೆಪ್ಟೆಂಬರ್ 16 ರಿಂದ ದಂಡ ವಿಧಿಸುವ ಪ್ರಕ್ರಿಯೆ ಆರಂಭವಾಗಲಿದೆ. ರಾಜ್ಯಾದ್ಯಂತ ಸೋಮವಾರದಿಂದ ವಾಹನಗಳ ತಪಾಸಣೆ ನಡೆಸಿ ದಂಡ ವಿಧಿಸಲಾಗುವುದು ಎನ್ನಲಾಗಿದೆ.

error: Content is protected !!
Scroll to Top