ಈದ್ ಮಿಲಾದ್- ಮಾರ್ಗಸೂಚಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 13. ಮುಸಲ್ಮಾನರ ಹಬ್ಬವಾದ ಈದ್ ಮಿಲಾದ್ ಪ್ರಯುಕ್ತ ಸುರಕ್ಷತಾ ದೃಷ್ಟಿಯಿಂದ ಬೆಂಗಳೂರು ನಗರ ಪೊಲೀಸರು ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ.

ಮೆರವಣಿಗೆಯಲ್ಲಿ ಪಾಲ್ಗೊಳ್ಳುವವರು ಯಾವುದೇ ಹರಿತವಾದ ವಸ್ತುಗಳನ್ನು ಹೊಂದಿರಬಾರದು. ಮೆರವಣಿಗೆಯ ಸಮಯದಲ್ಲಿ ಯಾವುದೇ ಕಾರಣಕ್ಕೂ ಡಿಜೆಗಳನ್ನು ಬಳಸಬಾರದು. ಸ್ತಬ್ದ ಚಿತ್ರಗಳು ಯಾವುದೇ ಪ್ರಚೋದನಾತ್ಮಕ ಅಂಶಗಳನ್ನು ಒಳಗೊಂಡಿರಬಾರದು. ಯಾವುದೇ ಪೂಜಾ ಸ್ಥಳಗಳ (ದೇವಸ್ಥಾನ/ಚರ್ಚ್ ಗಳ) ಮುಂಭಾಗದಲ್ಲಿ ಘೋಷಣೆಗಳನ್ನು ಕೂಗಬಾರದು. ಮೆರವಣಿಗೆಯ ಸಮಯದಲ್ಲಿ ಆಯೋಜಕರು ವಿದ್ಯುತ್ (ಕೆ.ಇ.ಬಿ) ಇಲಾಖೆಯಿಂದ ಸಿಬ್ಬಂದಿಯವರನ್ನು ನೇಮಿಸಿಕೊಂಡು ಯಾವುದೇ ವಿದ್ಯುತ್ ಸಂಪರ್ಕಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಮೆರವಣಿಗೆಯ ಸಂದರ್ಭದಲ್ಲಿ ಆಯೋಜಕರು ಬೆಂಕಿನಿಂದಿಸುವ ಸಾಮಗ್ರಿಯನ್ನು ಇಟ್ಟುಕೊಳ್ಳಬೇಕು. ಧ್ವನಿವರ್ಧಕಗಳನ್ನು ಬೆಳಿಗ್ಗೆ 06-00 ಗಂಟೆಯಿಂದ ರಾತ್ರಿ 10-00 ಗಂಟೆಯವರೆಗೆ ಮಾತ್ರ ಬಳಸಿಕೊಳ್ಳಬೇಕು. ಧ್ವನಿವರ್ಧಕಗಳ ಬಳಕೆಗೆ ಸ್ಥಳೀಯ ಪೊಲೀಸರ ಅನುಮತಿ/ಪರವಾನಗೆ ಪಡೆದುಕೊಳ್ಳಬೇಕು. ಈ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಧ್ವನಿವರ್ಧಕಗಳಿಂದ ಹೊರಡುವ ಶಬ್ದದ ಪ್ರಮಾಣವನ್ನು ಕಡಿಮೆ ಮಟ್ಟದಲ್ಲಿ ಇಟ್ಟುಕೊಳ್ಳಬೇಕು. ಹಾಗೂ ಯಾವುದೇ ಕಾರಣಕ್ಕೂ ಡಿ.ಜಿ. ಸೌಂಡ್ ಸಿಸ್ಟಂ ಅಳವಡಿಸಲು ಅವಕಾಶ ಇರುವುದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

error: Content is protected !!
Scroll to Top