ನಾಳೆ (ಸೆ.15) ಬೃಹತ್ ಮಾನವ ಸರಪಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ನಾಳೆ (ಸೆಪ್ಟೆಂಬರ್ 15) ನಡೆಯುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಜಿಲ್ಲೆಯಲ್ಲಿ ಮೂಲ್ಕಿ ಹೆಜಮಾಡಿ ಟೋಲ್ ಗೇಟ್ ನಿಂದ ಸುಳ್ಯ ಸಂಪಾಜೆ ಗೇಟ್ವರೆಗೆ ಬೃಹತ್ ಮಾನವ ಸರಪಳಿ ನಿರ್ಮಿಸಲಾಗುವುದು. ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಟ್ಟು 130 ಕಿ.ಮೀ. ಸಾಗಲಿರುವ ಮಾನವ ಸರಪಳಿಯಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ. ಮೂಲ್ಕಿಸುರತ್ಕಲ್ಬೈಕಂಪಾಡಿನಂತೂರುಪಡೀಲ್ಬಿ.ಸಿ.ರೋಡುಪುತ್ತೂರುಸುಳ್ಯ ಮಾರ್ಗದಲ್ಲಿ ಮಾನವ ಸರಪಳಿ ಸಾಗಲಿದೆ.

 

ಭಾನುವಾರ ಬೆಳಿಗ್ಗೆ 9.30 ರಿಂದ 9:37 ರವರೆಗೆ ಮಾನವ ಸರಪಳಿಯಲ್ಲಿ ಭಾಗವಹಿಸುವವರು ಸರತಿ ಸಾಲಿನಲ್ಲಿ ನಿಲ್ಲಬೇಕು. 9:37ರಿಂದ 9.40ರ ವರೆಗೆ ನಾಡಗೀತೆ, 9.41 ರಿಂದ 9:55 ವರೆಗೆ ಮುಖ್ಯ ಅತಿಥಿಗಳಿಂದ ಭಾಷಣ,  9:55 ರಿಂದ 9:57ರವರೆಗೆ ಸಂವಿಧಾನ ಪ್ರಸ್ತಾವನೆ ಓದುವುದು, 9:57ರಿಂದ 9:59ರ ವರೆಗೆ ಮಾನವ ಸರಪಳಿಯಲ್ಲಿ ಕೈ ಕೈ ಹಿಡಿದು ನಿಲ್ಲುವುದು. ಬೆಳಿಗ್ಗೆ 10 ಗಂಟೆಗೆ ಮಾನವ ಸರಪಳಿಯಲ್ಲಿಯೇ ತಮ್ಮ ಎರಡು ಕೈಗಳನ್ನು ಮೇಲೆತ್ತಿ ಜೈ ಹಿಂದ್, ಜೈ ಕರ್ನಾಟಕ ಘೋಷಣೆ ಕೂಗಿ ಸರಪಳಿಯನ್ನು ಕಳಚಲಿದ್ದಾರೆ. ಈಗಾಗಲೇ ಬೃಹತ್ ಮಾನವ ಸರಪಳಿಗೆ ಜಿಲ್ಲಾಡಳಿತ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿದೆ. ವಿದ್ಯಾರ್ಥಿಗಳು, ಯುವಜನರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಅಧಿಕಾರಿ ಸಿಬ್ಬಂಧಿಗಳು ಸೇರಿದಂತೆ ಸಾರ್ವಜನಿಕರು ಮಾನವ ಸರಪಳಿಯಲ್ಲಿ ಭಾಗವಹಿಸಲಿದ್ದಾರೆ. ಸುಗಮ ಸಂಚಾರಕ್ಕಾಗಿ ಹಾಗೂ ಸಂಚಾರ ನಿಯಂತ್ರಣಕ್ಕಾಗಿ ಹೆಚ್ಚಿನ ಬಂದೋಬಸ್ತ್ ಮತ್ತು ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

error: Content is protected !!
Scroll to Top