ಆಕಸ್ಮಿಕ ವಿದ್ಯುತ್ ಪ್ರವಹಿಸಿ ಎಲೆಕ್ಟ್ರೀಷಿಯನ್ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 14.  ಆಕಸ್ಮಿಕವಾಗಿ ವಿದ್ಯುತ್ ಪ್ರಹರಿಸಿ ಎಲೆಕ್ಟ್ರೀಷಿಯನ್ ವೋರ್ವರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ನಡೆದಿದೆ.

ಮೃತಪಟ್ಟವರನ್ನು ಉಳಿ ಗ್ರಾಮದ ನೆಕ್ಕಿಲ ಪಲ್ಕೆ ನಿವಾಸಿ ಸದಾನಂದ ಗೌಡ ಅವರ ಪುತ್ರ ದೇವದಾಸ್ (35)ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿರುವ ದೇವದಾಸ್ ಗುರುವಾರ ಸಂಜೆ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ಮನೆಯೊಂದರ ವಯರಿಂಗ್ ಕೆಲಸ ಮಾಡಿ, ಮನೆಯ ಹೊರಗಡೆಯಲ್ಲಿದ್ದ ಮೈನ್ ಸ್ವಿಚ್ ಬಳಿ ಕೆಲಸ ಮಾಡುತ್ತಿರುವಾಗ ಆಕಸ್ಮಿಕವಾಗಿ ವಿದ್ಯುತ್ ಪ್ರಹರಿಸಿದೆ. ಪರಿಣಾಮ ಕೆಳಗೆ ಬಿದ್ದು ಗಾಯಗೊಂಡಿದ್ದರು ಎನ್ನಲಾಗಿದೆ. ತಕ್ಷಣ ಸ್ಥಳದಲ್ಲಿದ್ದವರು ಗಾಯಾಳುವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದು, ಅಲ್ಲಿನ ವೈದ್ಯರು ಪರೀಕ್ಷಿಸಿದಾಗ ದೇವದಾಸ್ ರವರು ಮೃತಪಟ್ಟಿರುವುದನ್ನು ಖಚಿತಪಡಿಸಿದ್ದು, ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ ಎಂದು ವರದಿ ತಿಳಿಸಿದೆ.

Also Read  ಶಿವಮೊಗ್ಗದಲ್ಲಿ ನವವಿವಾಹಿತೆ ಅನುಮಾನಾಸ್ಪದ ಸಾವು..!

 

error: Content is protected !!
Scroll to Top