ಜಿಲ್ಲೆಯಲ್ಲಿ ಮತ್ತೆ ನಿಷೇಧಾಜ್ಞೆ ಮುಂದುವರಿಕೆ

ಮಂಗಳೂರು, ಜೂ.30. ಕಳೆದ ಹಲವಾರು ದಿನಗಳಿಂದ ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ನಡೆಯುತ್ತಿರುವುದರಿಂದ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜೂ.30 ನೇ ಮಂಗಳವಾರ ಮಧ್ಯರಾತ್ರಿ 12.00 ಗಂಟೆಯವರೆಗೆ 144 ಸೆಕ್ಷನ್ ಜಾರಿಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಪ್ರಸ್ತಾವನೆಯಂತೆ ಜಿಲ್ಲಾಧಿಕಾರಿ ಡಾ| ಕೆ.ಜಿ. ಜಗದೀಶ್ ಆದೇಶಿಸಿದ್ದರು. ಜಿಲ್ಲೆಯಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿ ಜು.02 ರವರೆಗೆ ನಿಷೇಧಾಜ್ಞೆಯನ್ನು ಮುಂದುವರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ಜಿ. ಜಗದೀಶ್ ರವರು ಮಂಗಳವಾರ ಆದೇಶಿಸಿದ್ದಾರೆ.

ಅದರಂತೆ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಹಾಗೂ ಸುಳ್ಯ ತಾಲೂಕುಗಳಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಈ ಸಂದರ್ಭದಲ್ಲಿ‌ ಐದು ಅಥವಾ ಹೆಚ್ಚು ಜನ ಗುಂಪು ಗೂಡುವುದನ್ನು ನಿಷೇಧಿಸಲಾಗಿದೆ.

error: Content is protected !!
Scroll to Top