ಸೂಕ್ತ ಚಿಕಿತ್ಸೆ ಸಿಗದೆ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ- ಮಮತಾ ಬ್ಯಾನರ್ಜಿ

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಸೆ. 14. ಕಿರಿಯ ವೈದ್ಯರು ನಡೆಸುತ್ತಿರುವ ಪ್ರತಿಭಟನೆ ಪರಿಣಾಮ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ನೀಡುವುದಾಗಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ವೈದ್ಯರು ನಡೆಸುತ್ತಿರುವ ಪ್ರತಿಭಟನೆಯಿಂದಾಗಿ ಚಿಕಿತ್ಸೆಯಲ್ಲಿ ಅಡಚಡಣೆ ಉಂಟಾಗಿದೆ. ಈ ಹಿನ್ನೆಲೆ ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ಸಿಗದೆ 29 ಮಂದಿ ಸಾವನ್ನಪ್ಪಿದ್ದಾರೆ. ಇದು ಅತ್ಯಂತ ದುರದೃಷ್ಟಕರ ವಿಷಯ. ಇದರಿಂದಾಗಿ ಮನಸ್ಸಿಗೆ ನೋವಾಗಿದೆ ಎಂದು ಬರೆದುಕೊಂಡಿದ್ದಾರೆ. ಮೃತರ ಕುಟುಂಬಗಳಿಗೆ ಸಹಾಯ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಪ್ರತಿ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಒದಗಿಸುವುದಾಗಿ ಮಮತಾ ತಿಳಿಸಿದ್ದಾರೆ.

Also Read  ಈ ಸಣ್ಣ ಉಪಾಯವನ್ನು ಮಾಡಿದರೆ ಶತ್ರು ನಿಮ್ಮಿಂದ ದೂರವಾಗುವುದು ಖಚಿತ.

 

error: Content is protected !!
Scroll to Top