(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಸೆ. 14. ಆಟೋಗೆ ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಹಾಗೂ ಪ್ರಯಾಣಿಕ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ಶುಕ್ರವಾರ ರಾತ್ರಿ ನಗರದ ನಲ್ಲೂರು ಗೇಟ್ ಬಳಿ ಸಂಭವಿಸಿದೆ.
ಮೃತರನ್ನು ಮಲ್ಲೇದೇವರನಹಳ್ಳಿ ಗ್ರಾಮದ ಚಂದ್ರಶೇಖರ್(38), ರಾಘವೇಂದ್ರ (40) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತರಾಗಿದ್ದಾರೆ ಎಂದು ತಿಳಿದು ಬಂದಿದೆ. ಶುಕ್ರವಾರ ರಾತ್ರಿ ಮೂಡಿಗೆರೆಯಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಸಾರಿಗೆ ಬಸ್ ಚಿಕ್ಕಮಗಳೂರು ನಗರ ಸಮೀಪದ ನಲ್ಲೂರು ಗೇಟ್ ಎಂಬಲ್ಲಿ ಎದುರಿನಿಂದ ಬರುತ್ತಿದ್ದ ಆಟೊಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಢಿಕ್ಕಿಯ ರಭಸಕ್ಕೆ ಆಟೋ ನಜ್ಜುಗುಜ್ಜಾಗಿದ್ದು, ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
