(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಸೆ. 14. ನಾಸಾದ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಬಾಹ್ಯಾಕಾಶದಲ್ಲಿದ್ದುಕೊಂಡೆ ಅಮೆರಿಕದ ಅಧ್ಯಕ್ಷಿಯ ಚುನಾವಣೆಗೆ ಮತ ಚಲಾವಣೆ ಮಾಡಲಿದ್ದಾರೆ ಎನ್ನಲಾಗಿದೆ.
ನಾಸಾದ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಸ್ಟಾರ್ ಲೈನರ್ ತಾಂತ್ರಿಕ ಸಮಸ್ಯೆಗಳಿಂದ ಬಾಹ್ಯಾಕಾಶದಲ್ಲೇ ಉಳಿದುಕೊಂಡಿದ್ದು, ಭೂಮಿಗೆ ವಾಪಾಸ್ಸು ಬರಲು 2025ರ ಫೆಬ್ರವರಿವರೆಗೆ ಕಾಯಬೇಕಾಗುತ್ತದೆ. ಅಮೆರಿಕದಲ್ಲಿ ನವೆಂಬರ್ ನಲ್ಲಿ ಚುನಾವಣೆ ನಡೆಯಲಿದೆ. ಚುನಾವಣೆಯಲ್ಲಿ ಬಾಹ್ಯಾಕಾಶದಿಂದಲೇ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಮತಚಲಾಯಿಸಲಿದ್ದಾರೆ.