(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 14. ಬೆಂಗಳೂರಿನ ಮಕ್ಕಳಲ್ಲಿ ಕಳೆದ ಕೆಲವು ದಿನಗಳಿಂದ ವೈರಾಣು ಜ್ವರ ಹೆಚ್ಚಾಗಿದೆ. ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗದಲ್ಲಿ ಶೇ 30 ರಷ್ಟು ಮಕ್ಕಳಲ್ಲಿ ಜ್ವರದ ಪ್ರಕರಣ ಏರಿಕೆ ಕಂಡ ಬಂದಿದೆ. ಇದಕ್ಕೆಲ್ಲ ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ಹವಾಮಾನ ಕಾರಣ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ಗಾಳಿ ಸಹಿತ ಮಳೆ, ಬಿಸಿಲು, ಚಳಿಯಿಂದಾಗಿ ಮಕ್ಕಳಲ್ಲಿ ಹೆಚ್ಚಾಗಿ ವೈರಾಣು ಜ್ವರ ಕಂಡು ಬರುತ್ತಿದೆ ಎಂದು ವರದಿಯಾಗಿದೆ.
ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳಲ್ಲಿಯೇ ಹೆಚ್ಚಾಗಿ ಈ ಜ್ವರ ಕಂಡು ಬರುತ್ತಿದೆ. ಮನೆಯಲ್ಲಿ ಮಕ್ಕಳಿಂದ ಮನೆ ಮಂದಿಗೆಲ್ಲ ಈ ವೈರಾಣು ಸೋಂಕು ಹರಡುತ್ತಿದ್ದು ಎಚ್ಚರಿಕೆ ವಹಿಸುವಂತೆ ವೈದ್ಯರು ಸೂಚಸಿದ್ದಾರೆ. ಅದರಲ್ಲೂ ಚಿಣ್ಣರಲ್ಲಿ ಕಂಡು ಬರುತ್ತಿರುವ ಈ ಸೋಂಕಿನ ಬಗ್ಗೆ ಹೆಚ್ಚು ನಿಗಾವಹಿಸುವಂತೆ ಪೋಷಕರಿಗೆ ತಿಳಸಿದ್ದಾರೆ.