(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 14. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡನೇ ಏರ್‌ಪೋರ್ಟ್ ನಿರ್ಮಾಣಕ್ಕೆ ಜಾಗ ಅಂತಿಮವಾಗಿದ್ದು, ನೆಲಮಂಗಲ- ಕುಣಿಗಲ್ ನಡುವೆ ಏರ್‌ಪೋರ್ಟ್ ನಿರ್ಮಾಣಕ್ಕೆ ಸ್ಥಳ ಆಯ್ಕೆ ಮಾಡಲಾಗಿದೆ.
ನೆಲಮಂಗಲದಿಂದ ಸುಮಾರು 5 ಕಿಲೋ ಮೀಟರ್ ದೂರದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಜಾಗ ಅಂತಿಮ ಮಾಡಲಾಗಿದೆ. ಇದಕ್ಕೆ ಸುಮಾರು 4-5 ಸಾವಿರ ಎಕರೆ ಭೂಮಿ ಬೇಕಾಗಿದ್ದು, 6-7 ಸ್ಥಳಗಳನ್ನು ಗುರುತಿಸಲಾಗಿತ್ತು.. ಇದರಲ್ಲಿ ನೆಲಮಂಗಲ ಆಯ್ಕೆ ಮಾಡಲಾಗಿದೆ. KIALಗೆ 2ನೇ ವಿಮಾನ ನಿಲ್ದಾಣ ನಿರ್ಮಾಣದ ವಿಚಾರವಾಗಿ ನಡೆದ 11ನೇ ಸಭೆಯಲ್ಲಿ ಈ ಸ್ಥಳವನ್ನು ಆಯ್ಕೆ ಮಾಡಲಾಗಿದೆ.